|

ಬೆಂಗಳೂರು – ಕರ್ನಾಟಕ ಸರಕಾರವು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿ, ಖಾಸಗಿ ಸಂಸ್ಥೆಗಳು ಸರಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು, ರಸ್ತೆಗಳು ಇತ್ಯಾದಿಗಳಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವ ಮೊದಲು ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿತ್ತು. ಈಗ, ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠವು ಸರಕಾರದ ಈ ಆದೇಶಕ್ಕೆ ತಡೆ ನೀಡಿ, ಮುಂದಿನ ವಿಚಾರಣೆಯನ್ನು ನವೆಂಬರ್ 17 ರವರೆಗೆ ಮುಂದೂಡಿದೆ. ರಾಜ್ಯ ಸರಕಾರದ ಈ ಆದೇಶದ ವಿರುದ್ಧ ‘ಪುನಶ್ಚೈತನ್ಯ ಸೇವಾ ಸಂಸ್ಥೆ’ಯು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
ಸರಕಾರದ ಈ ಆದೇಶವು ಭಾರತೀಯ ಸಂವಿಧಾನದ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಿದಂತೆ.
ಸಂಸ್ಥೆಯ ಪರವಾಗಿ ಹಿರಿಯ ವಕೀಲರಾದ ಅಶೋಕ ಹಾರನಹಳ್ಳಿ ಅವರು ವಾದ ಮಾಡಿದರು. ಸರಕಾರದ ಆದೇಶವು ಭಾರತೀಯ ಸಂವಿಧಾನದಲ್ಲಿ ನೀಡಲಾದ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಿದಂತಿದೆ ಎಂದು ಹೇಳಿದರು. ಸರಕಾರದ ಆದೇಶದ ಪ್ರಕಾರ, 10ಕ್ಕಿಂತ ಹೆಚ್ಚು ಜನರು ಒಗ್ಗೂಡಲು ಸಹ ಸರಕಾರದ ಅನುಮತಿ ಪಡೆಯಬೇಕು, ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಉದ್ಯಾನವನದಲ್ಲಿ ಒಂದು ಕಾರ್ಯಕ್ರಮ ನಡೆಸಿದರೂ ಸಹ, ಈ ಆದೇಶ ಅದನ್ನು ಕಾನೂನುಬಾಹಿರ ಎಂದು ಪರಿಗಣಿಸುತ್ತದೆ. ಪೊಲೀಸ್ ಕಾನೂನುಗಳು ಈಗಾಗಲೇ ಜಾರಿಯಲ್ಲಿರುವಾಗ, ಇಂತಹ ಆಡಳಿತಾತ್ಮಕ ಆದೇಶವನ್ನು ಹೊರಡಿಸುವ ಅಗತ್ಯವೇನಿತ್ತು? ಸರಕಾರ ಇಂತಹ ಆದೇಶಗಳನ್ನು ಹೊರಡಿಸಲು ಸಾಧ್ಯವಿಲ್ಲ.
ಇದಕ್ಕೆ ರಾಜ್ಯ ಸರಕಾರದ ಪರವಾಗಿ ಹಾಜರಿದ್ದ ನ್ಯಾಯವಾದಿಗಳು ಪ್ರತ್ಯುತ್ತರ ನೀಡಲು ಒಂದು ದಿನದ ಕಾಲಾವಕಾಶ ಕೇಳಿದರು. ಪೀಠವು ಸರಕಾರದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿ, ಈ ಆದೇಶದ ಮೂಲಕ ಕರ್ನಾಟಕ ಸರಕಾರವು ಭಾರತೀಯ ಸಂವಿಧಾನದ ಕಲಂ 19(2)(ಎ) ಮತ್ತು 19(1)(ಬಿ) ಅಡಿಯಲ್ಲಿ ನೀಡಲಾದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟಿತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!