ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ಮೋದಿಯವರಿಂದ ಶುಭಾಶಯ

ಬೆಂಗಳೂರು – ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರ ಪ್ರತೀಕವಾಗಿರುವ ಅವರ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿಯವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶುಭಕೋರಿದ್ದಾರೆ