
ರಾಮನಾಥಪುರಂ (ತಮಿಳುನಾಡು) – ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವು 1945 ರ ವಿಮಾನ ಅಪಘಾತದಲ್ಲಿ ಆಗಿರಲಿಲ್ಲ, ಎಂದು ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಅಕ್ಟೋಬರ್ 31 ರಂದು ಹೇಳಿಕೆ ನೀಡಿದ್ದಾರೆ. ರಾಮನಾಥಪುರಂ ಸಮೀಪದ ಪಾಸುಮಪೋನನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮುತ್ತುರಾಮಲಿಂಗ ತೇವರ್ ಅವರ 118 ನೇ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.
ರಾಧಾಕೃಷ್ಣನ್ ಅವರು ಮಾತು ಮುಂದುವರೆಸಿ, ”ನನ್ನ ಬಳಿ ಖಚಿತವಾದ ಪುರಾವೆಗಳು ಇಲ್ಲ; ಆದರೆ ನೇತಾಜಿ ಅವರ ಸಾವು ಆ ದುರಂತದಲ್ಲಿ ಆಗಿಲ್ಲ ಎಂದು ನಾನು ದೃಢವಾಗಿ ನಂಬುತ್ತೇನೆ. ಸ್ವತಃ ನೇತಾಜಿಯವರ ಅನುಯಾಯಿಗಳಾಗಿದ್ದ ತೇವರ್ ಅವರು ಇದನ್ನು ಹೇಳಿದ್ದರು ಮತ್ತು ಅವರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ತೇವರ್ ಅವರು ತಮ್ಮ ಜೀವನದಲ್ಲಿ ಎಂದಿಗೂ ಸುಳ್ಳು ಹೇಳಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ತೇವರ್ ಅವರ ಕೊಡುಗೆಯನ್ನು ಗೌರವಿಸಿ ಪ್ರಧಾನಿ ನೆಹರು ಅವರು ಅವರನ್ನು ಮುಖ್ಯಮಂತ್ರಿ ಮಾಡಲು ಬಯಸಿದ್ದರು; ಆದರೆ ಅವರು ಅದನ್ನು ನಿರಾಕರಿಸಿದರು. ‘ನೇತಾಜಿಯವರಿಗೆ ನ್ಯಾಯ ಸಿಗಬೇಕು’ ಎಂಬುದೇ ಅವರ ಏಕೈಕ ಗುರಿಯಾಗಿತ್ತು, ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!