ವಿಶ್ವಸಂಸ್ಥೆಯಲ್ಲಿ ಮತ್ತೆ ಪಾಕಿಸ್ತಾನಕ್ಕೆ ತಿವಿದ ಭಾರತ

ನ್ಯೂಯಾರ್ಕ್ (ಅಮೆರಿಕ) – ಪಾಕಿಸ್ತಾನಿ ಸೈನಿಕರು ಅಕ್ರಮವಾಗಿ ವಶಪಡಿಸಿಕೊಂಡಿರುವ ಕಾಶ್ಮೀರ ಪ್ರದೇಶದಲ್ಲಿ ಜನರ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿದೆ. ಪಾಕಿಸ್ತಾನವು ಈ ಜನರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನಿಲ್ಲಿಸಬೇಕು ಎಂದು ಭಾರತವು ವಿಶ್ವಸಂಸ್ಥೆಯಲ್ಲಿ ಆಗ್ರಹಿಸಿದೆ.
ವಿಶ್ವಸಂಸ್ಥೆಯಲ್ಲಿನ ಭಾರತದ ಕಾರ್ಯದರ್ಶಿ ಭಾವಿಕಾ ಮಂಗಳಾನಂದನ್ ಅವರು ಮಾತನಾಡಿ, ಕಳೆದ ಕೆಲವು ವಾರಗಳಲ್ಲಿ, ಪಾಕಿಸ್ತಾನಿ ಸೈನಿಕರು ಮತ್ತು ಅವರ ಸಹಚರರು ಕಾಶ್ಮೀರದ ತಮ್ಮ ವಶದಲ್ಲಿರುವ ಪ್ರದೇಶದಲ್ಲಿ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಪ್ರತಿಭಟಿಸುತ್ತಿರುವ ಹಲವು ಅಮಾಯಕ ನಾಗರಿಕರ ಹತ್ಯೆ ಮಾಡಿದ್ದಾರೆ. ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ನಡೆಯುತ್ತಿರುವ ಗಂಭೀರ ಮತ್ತು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನಿಲ್ಲಿಸಬೇಕು ಎಂದು ನಾವು ಕರೆ ನೀಡುತ್ತೇವೆ. ಅಲ್ಲಿನ ಜನರು ಪಾಕಿಸ್ತಾನದ ದಬ್ಬಾಳಿಕೆ, ಕ್ರೌರ್ಯ ಮತ್ತು ಸಂಪನ್ಮೂಲಗಳ ಅಕ್ರಮ ಬಳಕೆಯ ವಿರುದ್ಧ ಬಹಿರಂಗವಾಗಿ ದಂಗೆ ಏಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುವಿಶ್ವಸಂಸ್ಥೆಯಲ್ಲಿ ಭಾರತವು ಎಷ್ಟು ಬಾರಿ ಪಾಕಿಸ್ತಾನಕ್ಕೆ ಈ ರೀತಿ ಎಚ್ಚರಿಕೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಮತ್ತು ಮುಂದೆಯೂ ಆಗುವುದಿಲ್ಲ; ಏಕೆಂದರೆ ಪಾಕಿಸ್ತಾನಕ್ಕೆ ಶಬ್ದಗಳ ಭಾಷೆಯಲ್ಲ, ಶಸ್ತ್ರಾಸ್ತ್ರಗಳ ಭಾಷೆ ಮಾತ್ರ ಅರ್ಥವಾಗುತ್ತದೆ, ಅಲ್ಲದೇ ವಿಶ್ವಸಂಸ್ಥೆ ಕೇವಲ ಒಂದು ಬೆದರುಗೊಂಬೆಯಂತಿದ್ದು, ಅದರಿಂದ ಏನನ್ನಾದರೂ ನಿರೀಕ್ಷಿಸುವುದು ಹಾಸ್ಯಾಸ್ಪದವೇ ಆಗಿದೆ! |
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಪಾಕ್ ಸೈನಿಕರಿಂದ ಗುಂಡಿನ ದಾಳಿ : ೧೨ ಸಾವು, ೩೮ ಜನರಿಗೆ ಗಾಯ : POK Protest
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump