ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕೇಂದ್ರ ಸರಕಾರದ ಮೇಲೆ ಆರೋಪ

ಬೆಂಗಳೂರು – ಕೇಂದ್ರ ಸರಕಾರದಿಂದ ರಾಜ್ಯದ ಮೇಲೆ ಹಿಂದಿ ಹೇರುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಹಿಂದಿ ಮತ್ತು ಸಂಸ್ಕೃತದ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆಯಾದರೂ, ದೇಶದ ಇತರ ಭಾಷೆಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ನಮ್ಮ ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿವೆ. ಮಾತೃಭಾಷೆಯನ್ನು ಶಿಕ್ಷಣದ ಮಾಧ್ಯಮವಾಗಿಸುವ ಕಾನೂನು ಇರಬೇಕು. ಕೇಂದ್ರ ಸರಕಾರವು ಮಾತೃಭಾಷೆಯಲ್ಲಿ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು ಎಂದು ಕರ್ನಾಟಕದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರದ ಮೇಲೆ ಕನ್ನಡ ಭಾಷೆಯನ್ನು ನಿರ್ಲಕ್ಷ್ಯಿಸಿ, ಹಿಂದಿ ಹೇರಿಕೆಯ ಆರೋಪ ಮಾಡಿದರು. ಅವರು ರಾಜ್ಯದ ಜನತೆಗೆ ಕನ್ನಡ ಭಾಷೆಯನ್ನು ವಿರೋಧಿಸುವವರನ್ನು ವಿರೋಧಿಸುವಂತೆ ಅವರು ಕರೆ ನೀಡಿದರು. ಅವರು ಕರ್ನಾಟಕದ ಸಂಸ್ಥಾಪನಾ ದಿನದ ನಿಮಿತ್ತ ಆಯೋಜಿಸಲಾದ 70ನೇ ರಾಜ್ಯೋತ್ಸವದಲ್ಲಿ ಮಾತನಾಡುತ್ತಿದ್ದರು. ಕೇಂದ್ರ ಸರಕಾರ ಕರ್ನಾಟಕದೊಂದಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ, ಎಂದೂ ಸಹ ಅವರು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!