ನೇಪಾಳದಲ್ಲಿ ಸಾಮಾಜಿಕ ಮಾಧ್ಯಮಗಳ ನಿಷೇಧದಿಂದ ಉಂಟಾದ ಪರಿಣಾಮಗಳ ಉದಾಹರಣೆಯನ್ನು ನೀಡಿಎ ಸರ್ವೋಚ್ಚ ನ್ಯಾಯಾಲಯ !

ನವದೆಹಲಿ – 14 ರಿಂದ 18 ವರ್ಷದ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿಷೇಧಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಅರ್ಜಿದಾರರನ್ನು ಕುರಿತು, ನೇಪಾಳದಲ್ಲಿ ಇಂತಹ ನಿಷೇಧವನ್ನು ಜಾರಿಗೆ ತರಲು ಪ್ರಯತ್ನಿಸಿದಾಗ ಏನಾಯಿತು ಎಂದು ನಿಮಗೆ ತಿಳಿದಿದೆಯೇ? ಎಂದು ಪ್ರಶ್ನಿಸಿತು. ಇಂತಹ ನಿರ್ಧಾರಗಳು ನೀತಿಗೆ ಸಂಬಂಧಿಸಿವೆ, ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಸರಕಾರದ ಅಧಿಕಾರ ವ್ಯಾಪ್ತಿಯಲ್ಲಿರುತ್ತದೆ, ನ್ಯಾಯಾಂಗಕ್ಕಲ್ಲ ಎಂದು ಹೇಳಿದರು.
⚖️ Supreme Court dismisses plea seeking ban on social media use for children aged 14–18
📱 Court said such policy decisions are for the Government, not Judiciary
🇳🇵 Cited Nepal’s failed attempt to ban social media as an example
👩⚖️ Petitioner argued children are addicted… pic.twitter.com/jH42jt4BZF
— Sanatan Prabhat (@SanatanPrabhat) November 3, 2025
ಅರ್ಜಿದಾರರು,
‘ಕೋವಿಡ್-19’ ಸಾಂಕ್ರಾಮಿಕದ ನಂತರ ಮಕ್ಕಳು ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳ ಬಳಕೆಗೆ ದಾಸರಾಗಿದ್ದಾರೆ. ಇದರಿಂದ ಅವರ ಮಾನಸಿಕ ಸ್ಥಿತಿ ಮತ್ತು ಶಿಕ್ಷಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಅರ್ಜಿದಾರರು ಹೇಳಿದ್ದರು. ಯುರೋಪ್, ಆಸ್ಟ್ರೇಲಿಯಾ, ಚೀನಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ಚಿಕ್ಕ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದರ ಮೇಲೆ ನಿಷೇಧವಿದೆ; ಆದರೆ ಭಾರತದಲ್ಲಿ ಅಂತಹ ಯಾವುದೇ ನಿಯಮವಿಲ್ಲ. ಸಾಮಾಜಿಕ ಮಾಧ್ಯಮಗಳಿಂದಾಗಿ ಮಕ್ಕಳ ಏಕಾಗ್ರತೆ, ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ವರ್ತನೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ, ಹಾಗೂ ಪೋಷಕರ ಮೇಲ್ವಿಚಾರಣೆಯಲ್ಲಿ ಇದ್ದರೂ ಸಹ ಮಕ್ಕಳು ಸಂಪೂರ್ಣವಾಗಿ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!