
ಕೊಯಮತ್ತೂರು (ತಮಿಳುನಾಡು) – ಇಲ್ಲಿನ ವಿಮಾನ ನಿಲ್ದಾಣದಿಂದ 1 ಕಿ.ಮೀ. ದೂರದಲ್ಲಿ ಮೂವರು ಜನರು ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಬಲಾತ್ಕಾರ ಎಸಗಿರುವ ಘಟನೆ ನವೆಂಬರ್ 2 ರ ರಾತ್ರಿ ನಡೆದಿದೆ. ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಕುಳಿತಿದ್ದಾಗ ಆರೋಪಿಗಳು ಅಲ್ಲಿಗೆ ಬಂದು ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿ, ಬಲವಂತವಾಗಿ ವಿದ್ಯಾರ್ಥಿನಿಯನ್ನು ವಾಹನದಿಂದ ಹೊರಗೆ ಎಳೆದು ದ್ವಿಚಕ್ರ ವಾಹನದಲ್ಲಿ ಅಪಹರಿಸಿದ್ದಾರೆ. ನಂತರ ಅವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
😡 Kidnapping & Gang Rape near Coimbatore Airport (Tamil Nadu)
A young college student was brutally assaulted near the International Airport
🚨 BJP slams CM Stalin – “He should be ashamed”
⚖️ Until rapists are given death penalty, such horrific crimes won’t stop#Coimbatore… pic.twitter.com/YRiiAlBrBA
— Sanatan Prabhat (@SanatanPrabhat) November 3, 2025
ಮುಖ್ಯಮಂತ್ರಿ ಸ್ಟಾಲಿನ್ ಗೆ ನಾಚಿಕೆಯಾಗಬೇಕು !- ಭಾಜಪ
ಸ್ಟಾಲಿನ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚಾಗಿವೆ ಮತ್ತು ಅಪರಾಧಿಗಳಿಗೆ ಕಾನೂನಿನ ಭಯ ಕಡಿಮೆಯಾಗಿದೆ. ಮಂತ್ರಿಗಳಿಂದ ಅಧಿಕಾರಿಗಳವರೆಗೆ ಅಪರಾಧಿಗಳನ್ನು ರಕ್ಷಿಸುವ ಪ್ರವೃತ್ತಿ ಇದೆ. ಜನರನ್ನು ರಕ್ಷಿಸುವ ಬದಲು, ಟೀಕಿಸುವವರನ್ನು ಹತ್ತಿಕ್ಕಲು ಪೊಲೀಸರನ್ನು ಬಳಸಲಾಗುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಈ ಪರಿಸ್ಥಿತಿಯ ಬಗ್ಗೆ ನಾಚಿಕೆಯಾಗಬೇಕು ಎಂದು ಭಾಜಪ ನಾಯಕ ಕೆ. ಅಣ್ಣಾಮಲೈ ಟೀಕಿಸಿದ್ದಾರೆ.
ಸಂಪಾದಕೀಯ ನಿಲುವುಅತ್ಯಾಚಾರಿಗಳಿಗೆ ಸಾರ್ವಜನಿಕವಾಗಿ ಗಲ್ಲಿಗೇರಿಸುವ ಶಿಕ್ಷೆಯನ್ನು ನೀಡುವವರೆಗೆ ಇಂತಹ ಘಟನೆಗಳು ನಿಲ್ಲುವುದು ಕಷ್ಟ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!