ಲಿಖಿತ ವಿವರಣೆ ಸಲ್ಲಿಸಲು ಶಾಲೆಗೆ ಶಿಕ್ಷಣ ಇಲಾಖೆ ಆದೇಶ

ಮುಂಬಯಿ – ಚೆಂಬೂರಿನಲ್ಲಿರುವ ಸೇಂಟ್ ಆಂಥೋನಿ ಎಂಬ ಹೆಣ್ಣುಮಕ್ಕಳ ಪ್ರತಿಷ್ಠಿತ ಶಾಲೆಯಲ್ಲಿ ದೀಪಾವಳಿ ರಜೆಯ ನಂತರ ಶಾಲೆ ಪುನಾರಂಭವಾದಾಗ ಕೆಲವು ವಿದ್ಯಾರ್ಥಿನಿಯರ ಕೈಯಲ್ಲಿ ಮೆಹಂದಿ ಇರುವುದು ಕಂಡುಬಂದಿದೆ. ಶಾಲಾ ಆಡಳಿತ ಮಂಡಳಿಯು ಅವರನ್ನು ತರಗತಿಯಲ್ಲಿ ಕೂರಲು ನಿರಾಕರಿಸಿತು. ‘ಮೆಹಂದಿ ತೆಗೆದ ಹೊರತು ತರಗತಿಗೆ ಪ್ರವೇಶ ನೀಡುವುದಿಲ್ಲ’ ಎಂದು ಶಾಲೆ ಹೇಳಿದೆ ಎಂದು ವಿದ್ಯಾರ್ಥಿನಿಯರ ಪಾಲಕರು ಆರೋಪಿಸಿದ್ದಾರೆ. ಶಿಕ್ಷಕರು ಹೊರಹಾಕಿದ್ದರಿಂದ ವಿದ್ಯಾರ್ಥಿನಿಯರು ಮಾನಸಿಕ ಒತ್ತಡದಲ್ಲಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉಪಶಿಕ್ಷಣಾಧಿಕಾರಿ ಮತ್ತು ಶಿಕ್ಷಣ ನಿರೀಕ್ಷಕ ಡಾ. ಮುಷ್ತಾಕ್ ಶೇಖ್ ಅವರು ಶಾಲೆಗೆ ಭೇಟಿ ನೀಡಿ ಸಂಪೂರ್ಣ ವಿಚಾರಣೆ ನಡೆಸಿದರು. ಶಿಕ್ಷಣ ಇಲಾಖೆಯು ಶಾಲೆಗೆ ನೇರವಾಗಿ ನೋಟೀಸ್ ಜಾರಿ ಮಾಡಿದೆ ಮತ್ತು ‘ಮೆಹಂದಿಯ ಕಾರಣದಿಂದ ತರಗತಿಯಲ್ಲಿ ಕೂರಲು ಅವಕಾಶ ನೀಡದಿರುವುದು ನಿಯಮಬಾಹಿರ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಮೇಲೆ ಮಾಡಿದ ಅನ್ಯಾಯವಾಗಿದೆ’ ಎಂದು ತಿಳಿಸಿ, ಶಾಲೆಗೆ ಲಿಖಿತ ವಿವರಣೆಯನ್ನು ಸಲ್ಲಿಸಲು ಆದೇಶ ನೀಡಲಾಗಿದೆ.
🚨 When Mehndi Becomes a Crime in School
Girls with mehndi (henna) on their hands were sent out of class at St. Anthony School, Chembur, Mumbai 😡
📚 Education Dept has sought a written explanation from the school.
❓ Would they have dared to do this if the students belonged… pic.twitter.com/eCtUUL0Q32
— Sanatan Prabhat (@SanatanPrabhat) November 4, 2025
ಘಟನೆಯನ್ನು ನಿರಾಕರಿಸಿದ ಮುಖ್ಯೋಪಾಧ್ಯಾಯಿನಿ !
ಶಿಕ್ಷಕರು ಆರೋಪವನ್ನು ನಿರಾಕರಿಸಿದ್ದು, ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಮುಖ್ಯೋಪಾಧ್ಯಾಯಿನಿಯವರು, ಶಾಲೆಯಲ್ಲಿ ಇಂತಹ ಯಾವುದೇ ಪ್ರಸಂಗ ಸಂಭವಿಸಿಲ್ಲ. ವಿದ್ಯಾರ್ಥಿನಿಯರಿಗೆ ಕೇವಲ ಶಿಸ್ತಿನ ನಿಯಮಗಳನ್ನು ಪಾಲಿಸಲು ಹೇಳಲಾಯಿತು. ಶಿಕ್ಷಣ ಇಲಾಖೆಯ ನೋಟೀಸ್ ನಮಗೆ ಇನ್ನೂ ಸಿಕ್ಕಿಲ್ಲ ಎಂದು ಹೇಳಿದ್ದಾರೆ.
ಮುಂದಿನ ಹಂತದಲ್ಲಿ ಪ್ರತಿಭಟನೆಯ ಎಚ್ಚರಿಕೆ!
‘ವಿದ್ಯಾರ್ಥಿನಿಯನ್ನು ಆಕೆಯ ಸಾಂಸ್ಕೃತಿಕ ಗುರುತಿನೊಂದಿಗೆ ಶಾಲೆಗೆ ಬರದಂತೆ ಒತ್ತಾಯಿಸಲು ಸಾಧ್ಯವಿಲ್ಲ. ಸಂವಿಧಾನವು ಎಲ್ಲರಿಗೂ ಸಮಾನ ಶಿಕ್ಷಣದ ಹಕ್ಕು ನೀಡಿದೆ. ನಮ್ಮ ಮನವಿಯ ನಂತರ ವಿದ್ಯಾರ್ಥಿನಿಯರನ್ನು ತರಗತಿಯಲ್ಲಿ ಕೂರಿಸಲಾಯಿತು. ಮುಂದಿನ ಹಂತದಲ್ಲಿ ನಾವು ನಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಂಎನ್‌ಎಸ್ ಪ್ರಧಾನ ಕಾರ್ಯದರ್ಶಿ ಕರ್ಣ್ ದುನಬಳೆ ಎಚ್ಚರಿಕೆ ನೀಡಿದರು.
ಸಂಪಾದಕೀಯ ನಿಲುವು
|
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ