
ಕೊಯಮತ್ತೂರು (ತಮಿಳುನಾಡು) – ಇಲ್ಲಿನ ವಿಮಾನ ನಿಲ್ದಾಣದ ಬಳಿ ನವೆಂಬರ್ 2 ರ ರಾತ್ರಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಮೂವರು ಆರೋಪಿಗಳು ವೆಲ್ಲಿಕಿನಾರಂ ಬಳಿಯ ನಿರ್ಜನ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ನವೆಂಬರ್ 3 ರ ತಡರಾತ್ರಿ ಪೊಲೀಸರು ಅವರನ್ನು ಸುತ್ತುವರೆದರು. ಆರೋಪಿಗಳು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು. ಇದಕ್ಕೆ ಪ್ರತ್ಯುತ್ತರವಾಗಿ ಪೊಲೀಸರು ಗುಂಡು ಹಾರಿಸಿದರು. ಈ ವೇಳೆ ಆರೋಪಿಗಳ ಕಾಲಿಗೆ ಗಾಯಗಳಾಗಿವೆ. ನಂತರ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ನವೆಂಬರ್ 2 ರ ರಾತ್ರಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಕುಳಿತಿದ್ದಾಗ ಆರೋಪಿಗಳು ಬಂದು ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ವಿದ್ಯಾರ್ಥಿನಿಯನ್ನು ಬಲವಂತವಾಗಿ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಗಳನ್ನು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಗುಣಾ, ಸತೀಶ್ ಮತ್ತು ಕಾರ್ತಿಕ್ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. (ಪೊಲೀಸರು ಸಮಯಕ್ಕೆ ಸರಿಯಾಗಿ ಕಠಿಣ ಕ್ರಮ ಕೈಗೊಂಡಿದ್ದರೆ, ಅಪರಾಧಿಗಳು ಇಂತಹ ಕೃತ್ಯ ಎಸಗಲು ಸಾಧ್ಯವಾಗುತ್ತಿರಲಿಲ್ಲ! – ಸಂಪಾದಕರು)
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!