
ಇಸ್ಲಾಮಾಬಾದ್ – ಪರಮಾಣು ಶಕ್ತಿ ಹೊಂದಿರುವ ಉತ್ತರ ಕೊರಿಯಾದಲ್ಲಿ ಪಾಕಿಸ್ತಾನ ಸರಕಾರವು ತನ್ನ ರಾಯಭಾರಿ ಕಚೇರಿಯನ್ನು ಪುನರಾರಂಭಿಸಲಿದೆ. ಇತ್ತೀಚೆಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನವು ಪರಮಾಣು ಬಾಂಬ್ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಪಾಕಿಸ್ತಾನ ಸರಕಾರದ ಈ ಪ್ರಯತ್ನವು ಭಾರತ ಸೇರಿದಂತೆ ಇಡೀ ವಿಶ್ವಕ್ಕೆ ಪರಮಾಣು ಉದ್ವಿಗ್ನತೆಯನ್ನು ಹೆಚ್ಚಿಸಬಹುದು. ಉತ್ತರ ಕೊರಿಯಾ ಮತ್ತು ಪಾಕಿಸ್ತಾನದ ನಡುವಿನ ಸಂದೆಹಾಸ್ಪದ ಪರಮಾಣು ಮತ್ತು ಕ್ಷಿಪಣಿ ಸಂಬಂಧಗಳ ಕುರಿತು ಭಾರತವು ನಿರಂತರವಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶ್ನಿಸುತ್ತಿದೆ ಮತ್ತು ಇದರ ಮೇಲೆ ಕ್ರಮ ಕೈಗೊಳ್ಳಲು ಬೇಡಿಕೆ ಇಡುತ್ತಿದೆ.
೧. ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಡಾರ್ ಅವರು, ರಾಯಭಾರಿ ಕಚೇರಿಯನ್ನು ಪುನರಾರಂಭಿಸುವಂತೆ ಉತ್ತರ ಕೊರಿಯಾ ವಿನಂತಿಸಿದೆ ಎಂದು ಖಚಿತಪಡಿಸಿದ್ದಾರೆ. ರಷ್ಯಾ, ಚೀನಾ ಮತ್ತು ಉತ್ತರ ಕೊರಿಯಾದೊಂದಿಗೆ ಭೂಗತ ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿರುವ ದೇಶಗಳಲ್ಲಿ ಪಾಕಿಸ್ತಾನವೂ ಒಂದು ಎಂದು ಹೇಳಲಾಗುತ್ತದೆ.
೨. ಪಾಕಿಸ್ತಾನ ಮತ್ತು ಉತ್ತರ ಕೊರಿಯಾ ನಡುವಿನ ಪರಮಾಣು ಸಹಕಾರದ ಬಗ್ಗೆ ಭಾರತವು ಹಲವು ಬಾರಿ ಕಳವಳ ವ್ಯಕ್ತಪಡಿಸಿದೆ. 2017 ರಲ್ಲಿ, ಭಾರತವು ಉತ್ತರ ಕೊರಿಯಾದ ಪರಮಾಣುಪ್ರಸಾರ ಜಾಲದ ತನಿಖೆಗೆ ಔಪಚಾರಿಕವಾಗಿ ಒತ್ತಾಯಿಸಿತ್ತು. ದಕ್ಷಿಣ ಏಷ್ಯಾದಲ್ಲಿ ಉತ್ತರ ಕೊರಿಯಾ ನಡೆಸುತ್ತಿರುವ ಪರಮಾಣು ಮತ್ತು ಕ್ಷಿಪಣಿ ಪ್ರಸಾರದ ಚಟುವಟಿಕೆಗಳ ತನಿಖೆ ಅಗತ್ಯ ಎಂದು ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿತ್ತು; ಏಕೆಂದರೆ ಈ ಕೃತ್ಯಗಳು ಭಾರತದ ಭದ್ರತೆ ಮತ್ತು ಪ್ರಾದೇಶಿಕ ಶಾಂತಿಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರಬಹುದು.
೩. ಉತ್ತರ ಕೊರಿಯಾವು ಪಾಕಿಸ್ತಾನಕ್ಕೆ ಕ್ಷಿಪಣಿ ತಂತ್ರಜ್ಞಾನವನ್ನು ಪೂರೈಸಿದೆ, ಮತ್ತು ಪಾಕಿಸ್ತಾನವು ಉತ್ತರ ಕೊರಿಯಾಕ್ಕೆ ಪರಮಾಣು ತಂತ್ರಜ್ಞಾನವನ್ನು ಪೂರೈಸಿದೆ ಎಂದು ಹೇಳಲಾಗುತ್ತದೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid