ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಾಧಕಿಗೆ ಸತ್ಸಂಗದಲ್ಲಿ ಮಾಡಿದ ಅಮೂಲ್ಯ ಮಾರ್ಗದರ್ಶನ !

ಕು. ತೇಜಸ್ವಿ ಚವ್ಹಾಣ : ‘ಪ.ಪೂ. ಡಾಕ್ಟರ್, ನಾನು ನಾಮಜಪ ಮಾಡುವಾಗ ನನ್ನ ನಾಮಜಪವು ಉಸಿರಾಟದೊಂದಿಗೆ ಆಗುತ್ತದೆ. ಆ ಸಮಯದಲ್ಲಿ ನನ್ನ ಮನಸ್ಸು ಏಕಾಗ್ರವಾಗಿ ನನ್ನ ಧ್ಯಾನ ತಗಲಿದಂತೆ ಆಗುತ್ತದೆ. ಆಗ ನನ್ನ ಸುತ್ತಮುತ್ತಲು ಯಾರಾದರೂ ಮಾತನಾಡುತ್ತಿದ್ದರೂ ಅಥವಾ ಯಾರಾದರೂ ಸೇವೆ ಮಾಡುತ್ತಿದ್ದರೂ, ಅವರ ಕಡೆಗೆ ನನ್ನ ಗಮನ ಹೋಗುವುದಿಲ್ಲ. ಇದು ಸರಿಯಿದೆಯೇ ?

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ : ನಾಮದ ಕಡೆಗೆ ಹೆಚ್ಚು ಗಮನವಿರುತ್ತದೆಯಲ್ಲ ?
ಕು. ತೇಜಸ್ವಿ ಚವ್ಹಾಣ : ಹೌದು ನನ್ನ ನಾಮಜಪವು ಪೂರ್ಣ ಏಕಾಗ್ರತೆಯಿಂದಾಗುತ್ತದೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ : ಅದೇ ಮಹತ್ವದ್ದಾಗಿದೆ. ನಾಮಜಪದ ಹೊರತು ಬೇರೆ ಯಾವ ವಿಷಯಕ್ಕೂ ಏನೂ ಅರ್ಥವಿಲ್ಲ. ‘ನಾಮಜಪವು ಏಕಾಗ್ರತೆಯಿಂದಾಗುತ್ತದೆ’, ಇದು ಒಳ್ಳೆಯ ಪ್ರಗತಿಯ ಲಕ್ಷಣವಾಗಿದೆ !’
| ಆಧ್ಯಾತ್ಮಿಕ ತೊಂದರೆ : ಇದರರ್ಥ ವ್ಯಕ್ತಿಯಲ್ಲಿ ನಕಾರಾತ್ಮಕ ಸ್ಪಂದನಗಳಿರುವುದು. ವ್ಯಕ್ತಿಯಲ್ಲಿ ನಕಾರಾತ್ಮಕ ಸ್ಪಂದನಗಳು ಶೇ. ೫೦ ರಷ್ಟು ಅಥವಾ ಅದಕ್ಕಿಂತ ಹೆಚ್ಚು ಪ್ರಮಾಣದಲ್ಲಿರುವುದು ಎಂದರೆ ತೀವ್ರ ತೊಂದರೆ, ನಕಾರಾತ್ಮಕ ಸ್ಪಂದನಗಳು ಶೇ. ೩೦ ರಿಂದ ಶೇ ೪೯ ರಷ್ಟು ಇರುವುದು ಎಂದರೆ ಮಧ್ಯಮ ತೊಂದರೆ, ಶೇ. ೩೦ ಕ್ಕಿಂತ ಕಡಿಮೆಯಿರುವುದು ಅಂದರೆ ಮಂದ ಆಧ್ಯಾತ್ಮಿಕ ತೊಂದರೆ ಇರುವುದಾಗಿದೆ. ಆಧ್ಯಾತ್ಮಿಕ ತೊಂದರೆಯು ಪ್ರಾರಬ್ಧ, ಪೂರ್ವಜರ ತೊಂದರೆ ಇತ್ಯಾದಿ ಆಧ್ಯಾತ್ಮಿಕ ಸ್ತರದ ಕಾರಣಗಳಿಂದ ಆಗುತ್ತದೆ. ಆಧ್ಯಾತ್ಮಿಕ ತೊಂದರೆಗಳನ್ನು ಸಂತರು ಅಥವಾ ಸೂಕ್ಷ್ಮ ಸ್ಪಂದನಗಳನ್ನು ಅರಿಯುವ ಸಾಧಕರು ಕಂಡು ಹಿಡಿಯಬಲ್ಲರು.
ಕೆಟ್ಟ ಶಕ್ತಿ : ವಾತಾವರಣದಲ್ಲಿ ಉತ್ತಮ ಹಾಗೂ ಕೆಟ್ಟ ಎರಡೂ ಶಕ್ತಿಗಳು ಕಾರ್ಯನಿರತವಾಗಿರುತ್ತವೆ. ಒಳ್ಳೆಯ ಶಕ್ತಿ ಒಳ್ಳೆಯ ಕಾರ್ಯಕ್ಕಾಗಿ ಮಾನವನಿಗೆ ಸಹಾಯ ಮಾಡುತ್ತವೆ ಹಾಗೂ ಕೆಟ್ಟ ಶಕ್ತಿಗಳು ಅವನಿಗೆ ತೊಂದರೆ ಕೊಡುತ್ತವೆ. ಹಿಂದಿನ ಕಾಲದಲ್ಲಿ ಋಷಿಮುನಿಗಳ ಯಜ್ಞಗಳಲ್ಲಿ ರಾಕ್ಷಸರು ವಿಘ್ನಗಳನ್ನು ತಂದಿರುವ ಅನೇಕ ಕಥೆಗಳು ವೇದ ಪುರಾಣಗಳಲ್ಲಿ ಇವೆ. ಸೂಕ್ಷ್ಮ : ಪ್ರತ್ಯಕ್ಷ ಕಾಣುವ ಅವಯವಗಳಾದ ಮೂಗು, ಕಿವಿ, ಕಣ್ಣುಗಳು, ನಾಲಿಗೆ ಮತ್ತು ಚರ್ಮ ಇವು ಪಂಚಜ್ಞಾನೇಂದ್ರಿಯಗಳಾಗಿವೆ.ಈ ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿ ಇವುಗಳ ಆಚೆಗಿನ ಎಂದರೆ ಸೂಕ್ಷ್ಮ. ಸಾಧನೆಯಲ್ಲಿ ಪ್ರಗತಿ ಮಾಡಿಕೊಂಡ ಕೆಲವು ವ್ಯಕ್ತಿಗಳಿಗೆ ಈ ಸೂಕ್ಷ್ಮ ಸಂವೇದನೆಯ ಅರಿವಾಗುತ್ತದೆ. ಈ ಸೂಕ್ಷ್ಮ ಜ್ಞಾನದ ಬಗ್ಗೆ ವಿವಿಧ ಧರ್ಮಗ್ರಂಥಗಳಲ್ಲಿ ಉಲ್ಲೇಖವಿದೆ. |
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
’ಎಲ್ಲಿ ಹೋಗುತ್ತೇನೆ ಅಲ್ಲಿ ನೀವೇ (ಗುರುದೇವರು) ನನ್ನ ಸಂಗಾತಿ !’
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !