
ದುಬೈ – ಭಾರತದಿಂದ ದಕ್ಷಿಣ ಆಫ್ರಿಕಾದ ಡರ್ಬನ್ ಬಂದರಿನ ಕಡೆಗೆ ಹೋಗುತ್ತಿದ್ದ, ಮಾಲ್ಟಾ ಧ್ವಜದ ಅಡಿಯಲ್ಲಿ ಒಂದು ವ್ಯಾಪಾರಿ ಹಡಗಿನ ಮೇಲೆ ಸೊಮಾಲಿಯಾ ಕರಾವಳಿಯ ಬಳಿ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಲಾಗಿದೆ. ಈ ಘಟನೆಯ ನಂತರ, ಬ್ರಿಟನ್‌ನ ‘ನೌಕಾಪಡೆಯ ವ್ಯಾಪಾರ ಕಾರ್ಯಾಚರಣೆ ಕೇಂದ್ರ’ ಈ ಪ್ರದೇಶದ ಹಡಗುಗಳಿಗೆ ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದೆ. ಖಾಸಗಿ ಭದ್ರತಾ ಸಂಸ್ಥೆಯಾದ ‘ಎಂಬ್ರೆ’ ಈ ದಾಳಿ ನಡೆದಿರುವುದನ್ನು ದೃಢಪಡಿಸಿದೆ.
ಸೊಮಾಲಿ ಕಡಲ್ಗಳ್ಳರ ಮೇಲೆ ಸಂದೇಹ
‘ಎಂಬ್ರೆ’ ನೀಡಿದ ಮಾಹಿತಿಯ ಪ್ರಕಾರ, ಈ ದಾಳಿಯನ್ನು ಬಹುತೇಕ ಸೊಮಾಲಿ ಕಡಲ್ಗಳ್ಳರು ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಕಡಲ್ಗಳ್ಳರು ಈ ಪ್ರದೇಶದಲ್ಲಿ ಸಕ್ರಿಯರಾಗಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಒಂದು ಇರಾನಿ ಹಡಗನ್ನು ಸಹ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು ಎಂದು ಹೇಳಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಸೊಮಾಲಿ ಕಡಲ್ಗಳ್ಳರಿಂದ ನಡೆಯುವ ದಾಳಿಗಳಲ್ಲಿ ಹೆಚ್ಚಳವಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation