|

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಬರ್ಗುನಾ ಜಿಲ್ಲೆಯ ಅಮತಲಿ ಉಪಜಿಲ್ಲೆಯಲ್ಲಿ 38 ವರ್ಷದ ಹಿಂದೂ ಮಹಿಳೆಯ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಪೊಲೀಸರು ಆರೋಪಿಗಳಾದ ಸೈಫುಲ್ ಇಸ್ಲಾಂ ಮತ್ತು ಮೊಹಮ್ಮದ್ ಇಮ್ರಾನ್ ಎಂಬವರನ್ನು ಬಂಧಿಸಿದರು, ಆದರೆ ಕೂಡಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಇದರ ನಂತರ, ಇಬ್ಬರೂ ಆರೋಪಿಗಳು ದೂರು ಹಿಂಪಡೆಯಲು ಸಂತ್ರಸ್ತ ಹಿಂದೂ ಕುಟುಂಬಕ್ಕೆ ಬೆದರಿಕೆ ಹಾಕಲು ಪ್ರಾರಂಭಿಸಿದರು. ಇದರಿಂದಾಗಿ ಆ ಕುಟುಂಬವು ಮನೆ ಮತ್ತು ಆಸ್ತಿಯನ್ನು ಬಿಟ್ಟು ಪಲಾಯನ ಮಾಡಬೇಕಾಯಿತು. ಸಂತ್ರಸ್ತ ಕುಟುಂಬದವರು ಸದ್ಯ ತಮ್ಮ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದಾರೆ.
1.ಅಕ್ಟೋಬರ್ 23 ರಂದು ಈ ಇಬ್ಬರು ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿ, ಆಕೆಯ ಕೈ ಕಾಲು ಕಟ್ಟಿ ಅತ್ಯಾಚಾರ ಮಾಡಿದರು. ಭಯ ಮತ್ತು ಸಾಮಾಜಿಕ ಅಪಖ್ಯಾತಿಯಿಂದಾಗಿ ಸಂತ್ರಸ್ತೆಯು ತಕ್ಷಣವೇ ಪೊಲೀಸರಿಗೆ ದೂರು ನೀಡಲಿಲ್ಲ; ಆದರೆ, ಅಕ್ಟೋಬರ್ 29 ರಂದು ಈ ಆರೋಪಿಗಳು ಮತ್ತೆ ಮನೆಗೆ ನುಗ್ಗಿ ಎರಡನೇ ಬಾರಿಗೆ ಸಾಮೂಹಿಕ ಅತ್ಯಾಚಾರ ನಡೆಸಿದರು. ಆಗ ಆರೋಪಿ ಇಮ್ರಾನ್‌ನ ಸಹೋದರ ಇಮ್ರಾಜ್ ಈ ಸಂಪೂರ್ಣ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದನು. “ಪೊಲೀಸರಿಗೆ ದೂರು ನೀಡಿದರೆ, ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತೇವೆ ಮತ್ತು ನಿನ್ನನ್ನು ಕೊಲ್ಲುತ್ತೇವೆ” ಎಂದು ಆರೋಪಿಗಳು ಬೆದರಿಕೆ ಹಾಕಿದರು. ಕೊನೆಗೆ ಮಹಿಳೆ ಧೈರ್ಯ ಮಾಡಿ ನವೆಂಬರ್ 1 ರಂದು ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದರು.
2.ಮನೆಯಲ್ಲಿರುವುದಕ್ಕೆ ಭಯವಾಗುತ್ತಿದೆ ಎಂದು ಮಹಿಳೆಯ ಪತಿ, ಇಬ್ಬರು ಮಕ್ಕಳು ಹೇಳಿದರು. ನಾವು ಹಿಂದೂಗಳಾಗಿರುವುದರಿಂದ ಗ್ರಾಮವನ್ನು ಬಿಡಲು ಹೇಳಲಾಯಿತು.
3.ಸಂತ್ರಸ್ತೆಯ ಮಗ, “ನಾನು ಹೆದರಿದ್ದೇನೆ; ನನ್ನ ತಾಯಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು” ಎಂದು ಕೋರಿದನು.
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಇಂತಹ ಘಟನೆಗಳು ಹಲವು ವರ್ಷಗಳಿಂದ ನಡೆಯುತ್ತಿವೆ. ಅವುಗಳಲ್ಲಿ ಕೆಲವು ಘಟನೆಗಳು ಮಾತ್ರ ಬೆಳಕಿಗೆ ಬರುತ್ತವೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಉಳಿದಿರುವವರೆಗೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಮತ್ತು ಪ್ರಪಂಚದಾದ್ಯಂತದ ಹಿಂದೂಗಳು ಅವುಗಳನ್ನು ನಿರ್ಲಕ್ಷಿಸುತ್ತಲೇ ಇರುತ್ತಾರೆ – ಇದು ಪ್ರಸ್ತುತ ಚಿತ್ರಣವಾಗಿದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!