|

ನವದೆಹಲಿ – ದೆಹಲಿಯ ಕೆಂಪು ಕೋಟೆಯ ಬಳಿಯ ಪ್ರಸಿದ್ಧ ಚಾಂದಿನಿ ಚೌಕ್‌ನಲ್ಲಿರುವ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರ ೧ ರ ಸಮೀಪ ಸಂಜೆ ೭ ಗಂಟೆ ಸುಮಾರಿಗೆ ಒಂದರ ನಂತರ ಒಂದರಂತೆ ಅನೇಕ ಸ್ಫೋಟಗಳು ಸಂಭವಿಸಿವೆ. ಈ ಸ್ಫೋಟಗಳಿಂದಾಗಿ ಅಲ್ಲಿ ನಿಲ್ಲಿಸಿದ್ದ ೮ ನಾಲ್ಕು ವಾಹನಗಳು ಹೊತ್ತಿ ಉರಿದಿವೆ. ಇದರಲ್ಲಿ ಅನೇಕ ಜನರು ಮೃತಪಟ್ಟಿರುವ ಸಾಧ್ಯತೆ ಇದೆ. ಸದ್ಯ 13 ಜನರು ಮೃತಪಟ್ಟಿರುವುದು ಮತ್ತು ೮ ಜನ ಗಾಯಗೊಂಡಿರುವುದು ಅಧಿಕೃತವಾಗಿ ದೃಢಪಟ್ಟಿದೆ.
Breaking: Powerful explosion near Delhi’s #RedFort 💥
A car exploded, leaving at least 8 dead & 12 injured.
Police have declared a high alert across the capital.
Authorities are yet to confirm whether it was a bomb blast
Investigation underway#LalQila लाल किले
Video… pic.twitter.com/p0MPRARkV4— Sanatan Prabhat (@SanatanPrabhat) November 10, 2025
ಈ ಸ್ಫೋಟಗಳ ಶಬ್ದವು ಸುಮಾರು ಒಂದೂವರೆ ಕಿಲೋಮೀಟರ್ ದೂರದವರೆಗೆ ಕೇಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಾಗೆಯೇ, ಮೃತದೇಹಗಳ ಅಂಗಾಂಗಗಳು ೨೦ ಮೀಟರ್‌ಗಳಷ್ಟು ದೂರದವರೆಗೆ ಹಾರಿ ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕಟ್ಟಡಗಳ ಗೋಡೆಗಳು ಕೂಡ ಅಲುಗಾಡಿವೆ ಎಂದು ಹೇಳಲಾಗುತ್ತಿದೆ.
(ಸೌಜನ್ಯ – NDTV)
|
ಸ್ಫೋಟ ಸಂಭವಿಸಿದ ಸ್ಥಳದಿಂದ ಅತಿ ಸಮೀಪದಲ್ಲಿ ಗೌರಿಶಂಕರ ಮಂದಿರ ಮತ್ತು ದಿಗಂಬರ ಜೈನ ಮಂದಿರಗಳಿವೆ. ಈ ಮಂದಿರಗಳ ಕಿಟಕಿ ಗಾಜುಗಳು ಒಡೆದಿವೆ. ಇಲ್ಲಿನ ಒಂದು ಹಳೆಯ ಮಂದಿರದ ಗೋಡೆ ಕೂಡ ಕುಸಿದಿದೆ ಎಂದು ಹೇಳಲಾಗುತ್ತಿದೆ.
#WATCH | Delhi: Blast near Red Fort | Kishor Prasad, DIG CRPF reaches the spot.
He says, "It is too early to say anything. I am just going to the site…" pic.twitter.com/JCpKlWZqu5
— ANI (@ANI) November 10, 2025
ಮಂದಿರದ ಆವರಣದಲ್ಲಿ ಕೆಲವು ಮೃತದೇಹಗಳ ಅಂಗಾಂಗಗಳು ಪತ್ತೆಯಾಗಿವೆ. ಘಟನೆ ನಡೆದ ಕೂಡಲೇ ಅಗ್ನಿಶಮನ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ.
#WATCH | Delhi: Delhi Police Commissioner Satish Golcha says, "Today at around 6.52 pm, a slow-moving vehicle stopped at the red light. An explosion happened in that vehicle, and due to the explosion, nearby vehicles were also damaged. All agencies, FSL, NIA, are here… Some… pic.twitter.com/uIt7NRziur
— ANI (@ANI) November 10, 2025
ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ! – ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸ್ಫೋಟದ ನಂತರ ರಾತ್ರಿ 9.30 ರ ಸುಮಾರಿಗೆ ಎಎನ್‌ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡುತ್ತಾ,
#WATCH | Delhi: Blast near Red Fort Metro Station | Union Home Minister Amit Shah says "This evening, around 7 pm, a blast occurred in a Hyundai i20 car at the Subhash Marg traffic signal near the Red Fort in Delhi. The blast injured some pedestrians and damaged some vehicles.… pic.twitter.com/BfRei3r3tx
— ANI (@ANI) November 10, 2025
‘ಐ20’ ಹ್ಯುಂಡೈ ಕಾರಿನಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ದೆಹಲಿ ಪೊಲೀಸ್, ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮುಂತಾದ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಇಲ್ಲಿನ ಸಿಸಿಟಿವಿ ದೃಶ್ಯಾವಳಿಗಳ ಮಾಹಿತಿಯನ್ನು ಪಡೆಯಲಾಗುತ್ತಿದೆ. ಈ ಘಟನೆಯ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಈ ತನಿಖೆಯಿಂದ ಹೊರಬರುವ ಮಾಹಿತಿಯನ್ನು ನಂತರ ತಿಳಿಸಲಾಗುವುದು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಮೈಸೂರಿನಲ್ಲಿ ದಿಢೀರ್ ಸುದ್ದಿಗೋಷ್ಟಿಘಟನೆ ಸಂಭವಿಸಿದ ಸುದ್ದಿ ತಿಳಿದ ಕೂಡಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಮೈಸೂರಿನಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿ ಘಟನೆ ಕುರಿತು ಮಾತನಾಡಿದ್ದಾರೆ. ದೆಹಲಿಯಲ್ಲಿ ಸ್ಪೋಟ ನಡೆದಿದ್ದು, ಕೆಲವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇದೆ. ಈ ಘಟನೆ ಬಗ್ಗೆ ನನಗೆ ಗೊತ್ತಾದ ಕೂಡಲೇ ಮೈಸೂರು ಪೊಲೀಸರ ಜತೆ ಮಾತನಾಡಿದ್ದೇನೆ, ಬೆಂಗಳೂರು ಪೊಲೀಸರ ಜತೆ ಸಹ ಮಾತನಾಡುತ್ತೇನೆ ಎಂದರು. ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಜತೆ ಮಾತನಾಡುತ್ತೇನೆ. ಒಟ್ಟಾರೆಯಾಗಿ ಇಡೀ ರಾಜ್ಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸುವ ಕೆಲಸ ಮಾಡುತ್ತೇವೆ. ಎಲ್ಲ ಜಿಲ್ಲಾ ಕೇಂದ್ರಗಳು, ಬೆಂಗಳೂರು ನಗರ, ವಿಮಾನ ನಿಲ್ದಾಣಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು ಎನ್ನುವ ಸೂಚನೆಯನ್ನು ಈಗಾಗಲೇ ಕೊಟ್ಟಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು. ಇನ್ನು ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿದ ಸಿದ್ದರಾಮಯ್ಯ ಕುಟುಂದವರಿಗೆ ಸಂತಾಪವನ್ನು ಸೂಚಿಸಿದರು. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!