ಮುಂಬರುವ ದಿನಗಳಲ್ಲಿ ಮಾಲಿನ್ಯ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ!

ಮುಂಬಯಿ – ಪ್ರಸ್ತುತ ಚಳಿಯ ಪ್ರಮಾಣ ಹೆಚ್ಚಾಗಿದ್ದರೂ ಸಹ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಮುಂಬಯಿ ನಗರದ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಹದಗೆಟ್ಟಿದೆ. ಬೆಳಿಗ್ಗೆ ನಗರದ ಹಲವು ಭಾಗಗಳಲ್ಲಿ ದಟ್ಟ ಮಂಜು ಕವಿದಿತ್ತು. ಇದರಿಂದಾಗಿ ಗೋಚರತೆ ಕಡಿಮೆಯಾಯಿತು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ-ಅಂಶಗಳ ಪ್ರಕಾರ, ಮುಂಬಯಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 106 ರಿಂದ 160 ರ ನಡುವೆ ದಾಖಲಾಗಿದೆ. ನವೆಂಬರ್ 8 ರಂದು ಮುಂಬಯಿನ ಸೂಚ್ಯಂಕ 142 ರಷ್ಟಿತ್ತು. ಇದರಿಂದಾಗಿ, ಮುಂಬಯಿ ನಗರವು ವಿಶ್ವದ ಒಂಬತ್ತನೇ ಅತಿ ಹೆಚ್ಚು ಮಾಲಿನ್ಯಯುಕ್ತ ನಗರ ಎಂದು ನಿರ್ಧರಿಸಲಾಗಿತ್ತು.
ಚಳಿಯ ಪ್ರಮಾಣ ಹೆಚ್ಚಾಗುತ್ತಿರುವಾಗ ಗಾಳಿಯ ವೇಗ ಕಡಿಮೆಯಾಗುತ್ತದೆ. ಇದರಿಂದಾಗಿ ಗಾಳಿಯಲ್ಲಿನ ಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ. ಚಳಿ ಹೆಚ್ಚಾದಾಗ ವಾಯು ಮಾಲಿನ್ಯದ ಮಟ್ಟವೂ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಮುಂಬಯಿನ ಹಲವು ಪ್ರದೇಶಗಳ ಗಾಳಿಯು ಮಧ್ಯಮದಿಂದ ಕಳಪೆ ಗುಣಮಟ್ಟಕ್ಕೆ ತಲುಪುವ ಸಾಧ್ಯತೆಯನ್ನು ವ್ಯಕ್ತಪಡಿಸಲಾಗುತ್ತಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!