
ವಾಷಿಂಗ್ಟನ್ (ಅಮೆರಿಕ) – ಭಾರತ ಮತ್ತು ಅಮೆರಿಕ ಹೊಸ ವ್ಯಾಪಾರ ಒಪ್ಪಂದಕ್ಕೆ ಅಂತಿಮ ರೂಪ ನೀಡುವ ಹಂತದಲ್ಲಿವೆ ಮತ್ತು ಅಮೆರಿಕವು ಭಾರತದ ಮೇಲೆ ಹೇರಲಾದ ಸುಂಕಗಳನ್ನು ಕ್ರಮೇಣ ಕಡಿಮೆ ಮಾಡುವುದು, ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾಹಿತಿ ನೀಡಿದರು. ಭಾರತಕ್ಕೆ ಅಮೆರಿಕದ ಹೊಸ ರಾಯಭಾರಿ ಸರ್ಜಿಯೋ ಗೋರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಅವರು ಓವಲ್ ಆಫೀಸ್‌ನಲ್ಲಿ ಈ ಮಾಹಿತಿ ನೀಡಿದರು.
ಭಾರತವು ರಷ್ಯಾದಿಂದ ತೈಲ ಖರೀದಿ ಕಡಿಮೆ ಮಾಡಿದೆ! – ಟ್ರಂಪ್ ಅವರ ಹೇಳಿಕೆ
ಟ್ರಂಪ್ ಮಾತನಾಡಿ, “ಭಾರತೀಯರು ಈಗ ನನ್ನನ್ನು ಪ್ರೀತಿಸುವುದಿಲ್ಲ; ಆದರೆ ಅವರು ಮತ್ತೆ ನನ್ನನ್ನು ಪ್ರೀತಿಸುತ್ತಾರೆ. ನಮಗೆ ಒಂದು ಉತ್ತಮ ಒಪ್ಪಂದ ಸಿಗುತ್ತಿದೆ. ರಷ್ಯಾದಿಂದ ತೈಲ ಖರೀದಿಸುವುದರಿಂದ ಭಾರತದ ಮೇಲೆ ಹೆಚ್ಚಿನ ತೆರಿಗೆಗಳನ್ನು ವಿಧಿಸಲಾಗಿತ್ತು; ಆದರೆ ಈಗ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಗಣನೀಯವಾಗಿ ಕಡಿಮೆ ಮಾಡಿದೆ” ಎಂದು ಹೇಳಿದರು.
ಪ್ರಧಾನಿ ಮೋದಿಯವರೊಂದಿಗೆ ನನಗೆ ಉತ್ತಮ ಸಂಬಂಧವಿದೆ!
“ಭಾರತವು ವಿಶ್ವದ ಅತ್ಯಂತ ಹಳೆಯ ಸಂಸ್ಕೃತಿಗಳಲ್ಲಿ ಒಂದಾಗಿದೆ. ಇದು ವಿಶ್ವದ ಅತಿದೊಡ್ಡ ದೇಶವಾಗಿದ್ದು, 150 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರದೇಶವಾಗಿದೆ ಮತ್ತು ಅದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಪ್ರಮುಖ ಆರ್ಥಿಕ ಮತ್ತು ಕಾರ್ಯತಂತ್ರದ ಭದ್ರತಾ ಪಾಲುದಾರನಾಗಿದೆ. ಪ್ರಧಾನಿ ಮೋದಿ ಅವರೊಂದಿಗೆ ನಮಗೆ ಅದ್ಭುತ ಸಂಬಂಧವಿದೆ ಮತ್ತು ಸರ್ಜಿಯೋ ಗೋರ್ ಅವರು ಅದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ” ಎಂದು ಟ್ರಂಪ್ ಹೇಳಿದರು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation