ರಸ್ತೆ ಅಪಘಾತಗಳಲ್ಲಿ ಶೇ.45% ರಷ್ಟು ದ್ವಿಚಕ್ರ ವಾಹನ ಸವಾರರ ಸಾವು.

ನವದೆಹಲಿ – ದೇಶದಲ್ಲಿ 2014 ರಲ್ಲಿ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ ಸರಾಸರಿ 5 ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿದ್ದರು, ಆದರೆ 2023 ರಲ್ಲಿ ಈ ಸಂಖ್ಯೆ 9 ಕ್ಕೆ ಏರಿದೆ. ರಸ್ತೆ ಸಾರಿಗೆ ಸಚಿವಾಲಯದ ಪ್ರಕಾರ, 2023 ರಲ್ಲಿ ರಸ್ತೆ ಅಪಘಾತಗಳಲ್ಲಿ ಸಂಭವಿಸಿದ ಒಟ್ಟು ಸಾವುಗಳಲ್ಲಿ ದ್ವಿಚಕ್ರ ವಾಹನ ಸವಾರರ ಪ್ರಮಾಣ ಶೇ.45% ರಷ್ಟಾಗಿತ್ತು. (ನಾಗರಿಕರು ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಘಾತಗಳಲ್ಲಿ ಸಾವನ್ನಪ್ಪಲು ಬಿಡುವಂತಹ ಬಹುಶಃ ಪ್ರಪಂಚದ ಏಕೈಕ ದೇಶವೆಂದರೆ ಭಾರತ. ಈ ಪ್ರಮಾಣವನ್ನು ಕಡಿಮೆ ಮಾಡಲು ಪೋಲೀಸ್ ಮತ್ತು ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಲಿದೆ? – ಸಂಪಾದಕರು) 2014 ರಲ್ಲಿ ಈ ಸಂಖ್ಯೆ ಶೇ.30%ರಷ್ಟು ಇತ್ತು. 2023 ರಲ್ಲಿ ಸಂಭವಿಸಿದ ಒಟ್ಟು ಅಪಘಾತ ಸಾವುಗಳಲ್ಲಿ ಶೇ.69% ರಷ್ಟು ಸಾವುಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆದಿವೆ.
🚨 India’s road safety crisis deepens
🔸9 two-wheeler riders die every hour!
🔸Two-wheeler riders account for 45% of all road accident deaths!
• Ministry of Road Transport
📌India remains the only country where so many citizens die in accidents. What measures will the Police… pic.twitter.com/xaUs8avYiE
— Sanatan Prabhat (@SanatanPrabhat) November 11, 2025
ಕಳೆದ 10 ವರ್ಷಗಳಲ್ಲಿ ಒಟ್ಟು ರಸ್ತೆ ಅಪಘಾತದ ಸಾವಿನ ಪ್ರಮಾಣವು ಶೇ.24%ರಷ್ಟು ಹೆಚ್ಚಾಗಿದೆ. ಈ ಅವಧಿಯಲ್ಲಿ ದ್ವಿಚಕ್ರ ವಾಹನ ಸವಾರರ ಸಾವು ದ್ವಿಗುಣಗೊಂಡಿವೆ. ಇದಕ್ಕೆ ವ್ಯತಿರಿಕ್ತವಾಗಿ, ಕಾರು, ಬಸ್ಸು, ಟ್ರಕ್ ಮುಂತಾದ ಇತರ ವಾಹನಗಳಿಂದ ಸಂಭವಿಸುವ ಸಾವು ಕಡಿಮೆಯಾಗಿವೆ. ಅತಿವೇಗ, ಹೆಲ್ಮೆಟ್ ನ ಕಡಿಮೆ ಬಳಕೆ, ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ದುರ್ಬಲ ಕಾನೂನು ಮತ್ತು ಸುವ್ಯವಸ್ಥೆಯೇ ಈ ಸಾವುಗಳಿಗೆ ಪ್ರಮುಖ ಕಾರಣಗಳಾಗಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!