ಇಸ್ಲಾಮಾಬಾದ್‌ನಲ್ಲಿ ನಡೆದ ಸ್ಫೋಟದ ನಂತರ ಪಾಕಿಸ್ತಾನದ ರಕ್ಷಣಾ ಸಚಿವರಿಂದ ಪ್ರತಿದಾಳಿಯ ಎಚ್ಚರಿಕೆ !

ಇಸ್ಲಾಮಾಬಾದ್ (ಪಾಕಿಸ್ತಾನ) – ಅಫ್ಘಾನಿಸ್ತಾನದಲ್ಲಿರುವ ಭಯೋತ್ಪಾದಕ ಅಡಗುತಾಣಗಳ ಮೇಲೆ ಕ್ರಮ ಕೈಗೊಳ್ಳಬಹುದೆಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ. ನವೆಂಬರ್ 11 ರಂದು ಇಸ್ಲಾಮಾಬಾದ್ ಮತ್ತು ಖೈಬರ್ ಪಖ್ತುನ್‌ಖ್ವಾದಲ್ಲಿ ನಡೆದ ದಾಳಿಗಳ ಬಳಿಕ ಆಸಿಫ್ ಈ ಹೇಳಿಕೆ ನೀಡಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದು 36 ಮಂದಿ ಗಾಯಗೊಂಡಿದ್ದಾರೆ.
1. ಪಾಕಿಸ್ತಾನದ ಸುದ್ದಿ ವಾಹಿನಿಯಾದ ‘ಜಿಯೋ ನ್ಯೂಸ್’ಗೆ ನೀಡಿದ ಸಂದರ್ಶನದಲ್ಲಿ ಖ್ವಾಜಾ ಆಸಿಫ್, “ದೇವರ ಇಚ್ಛೆಯಿದ್ದರೆ, ನಾವು ಖಂಡಿತವಾಗಿಯೂ ಪ್ರತಿದಾಳಿ ಮಾಡುತ್ತೇವೆ. ಅಫ್ಘಾನಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಇಸ್ಲಾಮಾಬಾದ್‌ನಲ್ಲಿ ನಡೆದ ದಾಳಿಯ ನಂತರ ಪಾಕಿಸ್ತಾನವು ಕ್ರಮ ಕೈಗೊಳ್ಳುವಂತೆ ಅನಿವಾರ್ಯವಾಗಿದೆ” ಎಂದು ಹೇಳಿದರು.
2. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಈ ದಾಳಿಗೆ ಭಾರತವೇ ಕಾರಣ ಎಂದು ಆರೋಪಿಸಿದ್ದರೆ, ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಅಫ್ಘಾನ್ ಸರಕಾರದ ಮೇಲೆ ಆರೋಪ ಹೇರಿದ್ದಾರೆ. ಅಫ್ಘಾನಿಸ್ತಾನದಿಂದ ಪಾಕಿಸ್ತಾನಕ್ಕೆ ಭಯೋತ್ಪಾದಕರು ಅಕ್ರಮವಾಗಿ ಬರುತ್ತಿದ್ದಾರೆ ಎಂದು ಖ್ವಾಜಾ ಆಸಿಫ್ ಆರೋಪಿಸಿದರು. ಕಳೆದ ವರ್ಷ 2,500 ರಿಂದ 3,000 ಭಯೋತ್ಪಾದಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗಿದೆ. ಹತರಾದ ಭಯೋತ್ಪಾದಕರಲ್ಲಿ ಶೇಕಡಾ 55% ರಷ್ಟು ಜನರು ಅಫ್ಘಾನಿಯರಾಗಿದ್ದರು.
3. ಇಸ್ಲಾಮಾಬಾದ್ ಸ್ಫೋಟದ ಒಂದು ದಿನ ಮೊದಲು, ಪಾಕಿಸ್ತಾನಿ ಸೇನೆಯು ಖೈಬರ್ ಪಖ್ತುನ್‌ಖ್ವಾದ ವಾನಾ ನಗರದಲ್ಲಿರುವ ಮಿಲಿಟರಿ ಕಾಲೇಜಿನ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿತ್ತು. ಈ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು, ಮತ್ತು ಮೂವರು ಆ ಕಾಲೇಜು ಆವರಣದ ಒಂದು ಕಟ್ಟಡದಲ್ಲಿ ಸಿಲುಕಿಕೊಂಡಿದ್ದರು. ಈ ದಾಳಿಯಲ್ಲಿ ಸುಮಾರು 16 ನಾಗರಿಕರು ಮತ್ತು ಕೆಲವು ಸೈನಿಕರು ಗಾಯಗೊಂಡಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation