ಕಾಂಗ್ರೆಸ್ಸಿನ ಬೇಡಿಕೆಯ ನಂತರ ಮಸೀದಿಗಳಿಗೆ ಭೇಟಿ ನೀಡದಿರುವ ಬಗ್ಗೆ ಪೊಲೀಸರ ಭರವಸೆ

ವಿಟ್ಲ – ಗೋಹತ್ಯಾ ನಿಷೇಧ ಕಾನೂನಿನ ಜಾಗೃತಿ ಕಾರ್ಯಕ್ರಮಕ್ಕಾಗಿ ಮಸೀದಿಯನ್ನು ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಸಮುದಾಯದ ನಾಯಕರು ಪೊಲೀಸ್ ಇಲಾಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಅಲ್ಪಸಂಖ್ಯಾತ ನಾಯಕ ಎಂ.ಎಸ್. ಮಹಮ್ಮದ್ ಅವರ ನೇತೃತ್ವದಲ್ಲಿ ನಿಯೋಗವೊಂದು ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ನಿಯೋಗವು ಪೊಲೀಸರೊಂದಿಗೆ ಚರ್ಚಿಸಿ, ಕಾನೂನುಬಾಹಿರ ಅಥವಾ ಅನೈತಿಕ ಕೃತ್ಯಗಳಲ್ಲಿ ಭಾಗಿಯಾಗುವ ಯಾರ ವಿರುದ್ಧವಾದರೂ ನಿಸ್ಸಂದೇಹವಾಗಿ ಕ್ರಮ ತೆಗೆದುಕೊಳ್ಳಿ; ಆದರೆ ಒಂದು ಸಮುದಾಯವನ್ನು ಗುರಿಯಾಗಿಸಿ ಮಸೀದಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸರಿಯಲ್ಲ. ಗೋಹತ್ಯೆ ಮತ್ತು ಮಾದಕ ವಸ್ತುಗಳ ವ್ಯಸನದ ಕುರಿತು ಪೊಲೀಸರು ಸಾರ್ವಜನಿಕ ಮಟ್ಟದಲ್ಲಿ ಜಾಗೃತಿ ಮೂಡಿಸಿದರೆ ನಮ್ಮ ಯಾವುದೇ ವಿರೋಧವಿಲ್ಲ; ಆದರೆ ಒಂದು ಸಮುದಾಯವನ್ನು ಗುರಿಯಾಗಿಸಿ ಕಾನೂನಿಗೆ ಸವಾಲು ಹಾಕುವ ಸಮಾಜಘಾತಕರಲ್ಲಿ ಧರ್ಮವನ್ನು ಹುಡುಕುವುದು ನ್ಯಾಯೋಚಿತವಲ್ಲ. ನಮ್ಮ ಧಾರ್ಮಿಕ ನಾಯಕರು ಪ್ರತಿ ಶುಕ್ರವಾರ ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. (ಹಾಗಿದ್ದರೆ, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋಹತ್ಯೆ ಹೇಗೆ ನಡೆಯುತ್ತಿದೆ? – ಸಂಪಾದಕರು)
ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಠಾಣೆಯ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು, ‘ವಿಟ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಮಸೀದಿಗಳಿಗೆ ಪೊಲೀಸರು ಭೇಟಿ ನೀಡುವುದಿಲ್ಲ’ ಎಂದು ಭರವಸೆ ನೀಡಿದರು.
ಸಂಪಾದಕೀಯ ನಿಲುವು
|
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!