ಪಾಕಿಸ್ತಾನದೊಂದಿಗೆ ನೇರ ಸಂಪರ್ಕ ಹೊಂದಿರುವುದು ಬಹಿರಂಗ

ಕರ್ಣಾವತಿ (ಗುಜರಾತ್) – ಗುಜರಾತ್ ಉಗ್ರ ನಿಗ್ರಹ ದಳವು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಜಾಲಕ್ಕೆ ಸಂಬಂಧಿಸಿದ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ. ಆತನ ಹೆಸರು ಗುರುಪ್ರಿತ್ ಸಿಂಗ್ ಅಲಿಯಾಸ್ ಗೋಪಿ ಬಿಲ್ಲಾ ಎಂದಾಗಿದೆ. ಈತನನ್ನು ಪಂಜಾಬ್ ಪೊಲೀಸರು ಬಹಳ ಸಮಯದಿಂದ ಹುಡುಕುತ್ತಿದ್ದರು.
🚨 Gujarat ATS Arrests Major Cross-Border Arms Smuggler
Gurpreet Singh aka Gopi Billa – a key operative moving weapons for a Pakistan-backed terror network – has been arrested by Gujarat ATS following a specific alert from Punjab Police.
🔍 The investigation now confirms his… pic.twitter.com/g3lNH7YU7J
— Sanatan Prabhat (@SanatanPrabhat) November 15, 2025
೧. ವರದಿಗಳ ಪ್ರಕಾರ ಗುರುಪ್ರಿತ್ ಪಾಕಿಸ್ತಾನದಲ್ಲಿ ಸಕ್ರಿಯವಾಗಿರುವ ಭಯೋತ್ಪಾದಕ ಗುಂಪುಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ. ಭಾರತದಲ್ಲಿನ ಭಯೋತ್ಪಾದಕರ ಚಟುವಟಿಕೆಗಳಿಗೆ ಸಹಾಯ ಮಾಡಿದ ಆರೋಪ ಈತನ ಮೇಲಿದೆ, ಜೊತೆಗೆ ಗಡಿಯನ್ನು ದಾಟಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಭಾರತಕ್ಕೆ ತಂದು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕಿತರಿಗೆ ತಲುಪಿಸಿದ ಆರೋಪವೂ ಈತನ ಮೇಲಿದೆ.
೨. ಪಂಜಾಬ್ ಪೊಲೀಸರು ಇತ್ತೀಚೆಗೆ ಬಂಧಿಸಿದ ಇಬ್ಬರು ಶಂಕಿತರಿಂದ ಗುರುಪ್ರಿತ್‌ನ ಹೆಸರು ಬಹಿರಂಗಗೊಂಡಿತು. ಇದರ ನಂತರ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳಕ್ಕೆ ತಕ್ಷಣವೇ ಮಾಹಿತಿ ನೀಡಲಾಯಿತು. ನಂತರ ಪಂಚಮಹಲ್ ಜಿಲ್ಲೆಯ ಹಲೋಲ್‌ನಲ್ಲಿರುವ ಒಂದು ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಗುರುಪ್ರಿತ್‌ನನ್ನು ಪತ್ತೆಹಚ್ಚಿ ಒಂದು ಹೊಟೇಲ್‌ನಿಂದ ವಶಕ್ಕೆ ತೆಗೆದುಕೊಳ್ಳಲಾಯಿತು.
೩. ಉಗ್ರ ನಿಗ್ರಹ ದಳವು ನೀಡಿದ ಮಾಹಿತಿಯ ಪ್ರಕಾರ, ಬಂಧನದ ನಂತರ ಗುರುಪ್ರಿತ್ ಗ್ರೆನೇಡ್ ದಾಳಿಯ ಸಂಚಿನಲ್ಲಿ ತಾನು ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಆತನನ್ನು ಪಂಜಾಬ್ ಪೊಲೀಸರ ಸುಪರ್ದಿಗೆ ಒಪ್ಪಿಸಲಾಗುವುದು. ಪಂಜಾಬ್‌ನ ಗುರುದಾಸ್‌ಪುರ ಪ್ರದೇಶದಲ್ಲಿ ಈತನ ವಿರುದ್ಧ ಈಗಾಗಲೇ ಪ್ರಕರಣಗಳು ದಾಖಲಾಗಿವೆ.
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ