ವೈಷ್ಣೋದೇವಿ ವೈದ್ಯಕೀಯ ಕಾಲೇಜಿನಲ್ಲಿ ಮುಸ್ಲಿಮರಿಗೆ ಹೆಚ್ಚಿನ ಸೀಟುಗಳ ನೀಡಿಕೆಯ ಪ್ರಕರಣ

ಜಮ್ಮು – ಇಲ್ಲಿನ ಕತ್ರಾ ಪ್ರದೇಶದಲ್ಲಿರುವ ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನಲ್ಲಿ ಈ ವರ್ಷದ ಎಂ.ಬಿ.ಬಿ.ಎಸ್. ಪ್ರವೇಶಕ್ಕೆ ೫೦ ಸೀಟುಗಳ ಪೈಕಿ ೪೨ ಸೀಟುಗಳನ್ನು ಮುಸ್ಲಿಂ ವಿದ್ಯಾರ್ಥಿಗಳಿಗೆ ನೀಡಿರುವ ಕುರಿತು ಇಲ್ಲಿ ಹಿಂದೂತ್ವನಿಷ್ಠ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ಸಂಪೂರ್ಣ ಪ್ರಕ್ರಿಯೆಯಲ್ಲಿ ಅನೇಕ ಲೋಪದೋಷಗಳಾಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿಲ್ಲ ಮತ್ತು ಅರ್ಹತಾ ಪಟ್ಟಿಯನ್ನು (ಮೆರಿಟ್ ಲಿಸ್ಟ್) ಸ್ಪಷ್ಟವಾಗಿ ಘೋಷಿಸಲಾಗಿಲ್ಲ ಎಂದೂ ಅವರು ದೂರಿದ್ದಾರೆ.
೧. ಯುವ ರಜಪೂತ ಸಭಾ ಮತ್ತು ಮೂವ್‌ಮೆಂಟ್ ಕಲ್ಕಿ ಸಂಘಟನೆಗಳು ಕಾಲೇಜಿನ ಪ್ರವೇಶದ್ವಾರದ ಹೊರಗೆ ಪ್ರತಿಭಟನೆ ನಡೆಸಿದವು. ಈ ಕಾಲೇಜನ್ನು ಶ್ರೀ ಮಾತಾ ವೈಷ್ಣೋದೇವಿ ಶ್ರೈನ್ ಬೋರ್ಡ್ ನಡೆಸುತ್ತಿದೆ ಮತ್ತು ಈ ಬೋರ್ಡ್ ಹಿಂದೂ ಭಕ್ತರ ನಿಧಿಯಿಂದ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ಪ್ರವೇಶ ಪ್ರಕ್ರಿಯೆಯು ಸಂಪೂರ್ಣವಾಗಿ ಅರ್ಹತೆ ಮತ್ತು ಪಾರದರ್ಶಕತೆಯ ಮಾನದಂಡಗಳನ್ನು ಆಧರಿಸಿರಬೇಕು.
೨. ಯುವ ರಜಪೂತ ಸಭಾದ ನಾಯಕರು, ಇಂತಹ ಆರೋಪಗಳು ವೈದ್ಯಕೀಯ ಶಿಕ್ಷಣದಂತಹ ಪ್ರಮುಖ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಿದರು. ಅವರು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದರು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!