ವ್ಯವಸ್ಥಾಪಕ ಸಮಿತಿಯ ವಿರುದ್ಧ ದೂರು ದಾಖಲು!

ಸಂಭಲ್ (ಉತ್ತರ ಪ್ರದೇಶ) – ಇಲ್ಲಿನ ಜಾಮಾ (ಜಾಮಿಯಾ) ಮಸೀದಿಯ ವ್ಯವಸ್ಥಾಪಕ ಸಮಿತಿಯು ಇತ್ತೀಚೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎ.ಎಸ್.ಐ. – ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ) ತಂಡದೊಂದಿಗೆ ಅನುಚಿತವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಎ.ಎಸ್.ಐ. ತಂಡವು ನಡೆಸುತ್ತಿದ್ದ ಪರಿಶೀಲನೆಯನ್ನು ತಡೆಯುವ ಉದ್ದೇಶದಿಂದ ಸಮಿತಿಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಮಸೀದಿ ಸಮಿತಿಯ ಸಿಬ್ಬಂದಿಯಾದ ಹಾಫೀಜ್ ಮತ್ತು ಮೊಹಮ್ಮದ್ ಕಾಸಿಫ್ ಖಾನ್ ಅವರು ಪುರಾತತ್ವ ತಂಡಕ್ಕೆ ಮಸೀದಿಯ ಮುಖ್ಯ ಗುಮ್ಮಟದೊಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದರು. ಈ ಕುರಿತು ಎ.ಎಸ್.ಐ.ಯ ಕಿರಿಯ ಇಂಜಿನಿಯರ್ ಅವರು ಸಂಭಲ್ ಸಾದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಅಲ್ಲದೇ, ಸಂಪೂರ್ಣ ಪ್ರಕರಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೂ ಲಿಖಿತ ರೂಪದಲ್ಲಿ ನೀಡಿದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಮಸೀದಿ ವ್ಯವಸ್ಥಾಪಕ ಸಮಿತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಪುರಾತತ್ವ ಇಲಾಖೆಯ ತಂಡಕ್ಕೆ ಮಸೀದಿಯೊಳಗೆ ಪ್ರವೇಶಿಸಲು ವಿರೋಧವಾಗುತ್ತಿರುವುದರಿಂದ, ಮಸೀದಿಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಯಾರಿಗಾದರೂ ಅನಿಸಿದರೆ, ಅದರಲ್ಲಿ ತಪ್ಪೇನಿದೆ? |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ