
ಶಿವಮೊಗ್ಗ – ನವೆಂಬರ್ 18 ರಂದು ಇಲ್ಲಿನ ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ’ ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪ್ರತಿಭಟನೆ ನಡೆಸಿತು. ತೀವ್ರ ವಿರೋಧದ ನಡುವೆಯೂ ಈ ವಿಚಾರ ಸಂಕಿರಣವು ಯಶಸ್ವಿಯಾಗಿ ನಡೆಯಿತು.
ಜೀವನ ಮಾರ್ಗವನ್ನು ತೋರಿಸುವ ಭಗವದ್ಗೀತೆ! – ನಿವೃತ್ತ ನ್ಯಾಯಮೂರ್ತಿ ಎಚ್. ಬಿಳಪ್ಪ
ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್. ಬಿಳಪ್ಪ ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅರವಿಂದ ಘೋಷ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್ ಮುಂತಾದವರ ಮೇಲೆ ಭಗವದ್ಗೀತೆಯ ಪ್ರಭಾವವಿತ್ತು, ಇದರಿಂದ ಅವರಿಗೆ ಆತ್ಮಶಕ್ತಿ ದೊರೆಯಿತು. ಮಹಾನ್ ವಿಜ್ಞಾನಿ ಐನ್‌ಸ್ಟೈನ್ ಕೂಡ ಸಮಾಜದ ಮೇಲೆ ಭಗವದ್ಗೀತೆಯ ಪರಿಣಾಮಗಳ ಬಗ್ಗೆ ಉಲ್ಲೇಖಿಸಿದ್ದಾರೆ. ಜೀವನದ ಮಾರ್ಗವನ್ನು ತೋರಿಸುವುದು ಭಗವದ್ಗೀತೆಯ ಕಾರ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.
ಇದು ಚರ್ಚೆಗೆ ಸೂಕ್ತ ವೇದಿಕೆಯಲ್ಲ! – ಕುಲಸಚಿವ ಪ್ರೊ. ಎ. ಎಲ್. ಮಂಜುನಾಥ
ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎ. ಎಲ್. ಮಂಜುನಾಥ ಅವರು ಮಾತನಾಡಿ, ಭಗವದ್ಗೀತೆಯಲ್ಲಿ ಚಾತುರ್ವರ್ಣ ವ್ಯವಸ್ಥೆಯ ಬಗ್ಗೆ ಹೇಳಲಾಗಿದೆ. ಇದೇ ಕಾರಣಕ್ಕೆ ಇಂದು ಹೊರಗಡೆ ಪ್ರತಿಭಟನೆ ನಡೆಯುತ್ತಿದೆ. ದಲಿತ ಸಂಘರ್ಷ ಸಮಿತಿಯವರು ಹೊರಗೆ ಆಂದೋಲನ ಮಾಡುತ್ತಿದ್ದಾರೆ. ಅವರನ್ನು ಒಳಗೆ ಕರೆಯುವ ಇಚ್ಛೆ ನನಗಿದೆ; ಆದರೆ ಇದು ಸರಿಯಾದ ವೇದಿಕೆಯಲ್ಲ. ಅವರಿಗಾಗಿ ನಾವು ಪ್ರತ್ಯೇಕ ವೇದಿಕೆಯನ್ನು ಒದಗಿಸುತ್ತೇವೆ. ರಾಜಕಾರಣಿಗಳು ಇದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಇಂತಹ ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಸ್ವೀಕರಿಸುತ್ತೇನೆ; ಆದರೆ ಅದು ಚರ್ಚೆಯ ರೂಪದಲ್ಲಿ ಇರಬೇಕು. ಇಂದು ಜನರು ‘ಲೇಬಲ್’ (ವಿಚಾರಧಾರೆ) ಹಚ್ಚಿ ಮಾತನಾಡುತ್ತಾರೆ; ಆದರೆ ಕೇವಲ ವಿಚಾರಗಳ ಬಗ್ಗೆ ಮಾತನಾಡಬೇಕು. ಡಾ. ಅಂಬೇಡ್ಕರ್ ಅವರಿಗೆ ಭಗವದ್ಗೀತೆಯ ಬಗ್ಗೆ ಕೆಲವು ಸಂಶಯಗಳಿದ್ದವು ಎಂದು ಅವರು ಸ್ಪಷ್ಟಪಡಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!