
ಫಗವಾಡಾ (ಪಂಜಾಬ್) – ಇಲ್ಲಿ ಶಿವಸೇನಾ ಪಂಜಾಬ್‌ನ ಮುಖ್ಯಸ್ಥ ಇಂದ್ರಜೀತ್ ಕರ್ವಲ್ ಮತ್ತು ಅವರ ಮಗ ಜಿಮ್ಮಿ ಕರ್ವಲ್ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಗೌಶಾಲಾ ರಸ್ತೆಯಲ್ಲಿ ನಡೆದಿದೆ. ಸುಮಾರು ಆರು ದಾಳಿಕೋರರು ಬೈಕ್‌ಗಳಲ್ಲಿ ಬಂದು ಇಬ್ಬರ ಮೇಲೂ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಅಲ್ಲಿಂದ ಪರಾರಿಯಾದರು. ಓಡಿ ಹೋಗುವಾಗ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಇದರಿಂದ ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಈ ಘಟನೆಯ ನಂತರ ನಗರದಾದ್ಯಂತ ಆಕ್ರೋಶದ ಅಲೆ ಎದ್ದಿದೆ; ಶಿವಸೇನೆಯು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆಯ ವಿರುದ್ಧ ಬಂದ್‌ಗೆ ಕರೆ ನೀಡಿದೆ. ಕೇವಲ ನಾಲ್ಕು ದಿನಗಳ ಹಿಂದೆ ಪಂಜಾಬ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರೊಬ್ಬರ ಮಗನ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು.
೧. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಈ ಘಟನೆ ವೈಯಕ್ತಿಕ ದ್ವೇಷ, ಗ್ಯಾಂಗ್‌ವಾರ್ ಅಥವಾ ಯಾವುದಾದರೂ ಸಂಘಟಿತ ಗ್ಯಾಂಗ್‌ಗೆ ಸಂಬಂಧಿಸಿರುವ ಸಾಧ್ಯತೆ ಇದೆ ಎಂದು ಸಂದೇಹ ವ್ಯಕ್ತಪಡಿಸಲಾಗಿದೆ.
೨. ಸ್ಥಳೀಯ ಶಾಸಕ ಬಲ್ವಿಂದರ್ ಸಿಂಗ್ ಧಾಲಿವಾಲ್, ಮಹಾಪೌರ ರಾಮಪಾಲ್ ಉಪ್ಪಲ್ ಸೇರಿದಂತೆ ಹಲವು ರಾಜಕೀಯ ಮತ್ತು ಸಾಮಾಜಿಕ ಸಂಸ್ಥೆಗಳ ಪ್ರತಿನಿಧಿಗಳು ಆಸ್ಪತ್ರೆಗೆ ಭೇಟಿ ನೀಡಿ ಕರ್ವಲ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಸಂಪಾದಕೀಯ ನಿಲುವುಪಂಜಾಬ್ನಲ್ಲಿ ಹಿಂದೂಗಳು ಮತ್ತು ಅವರ ನಾಯಕರನ್ನು ಹೆಕ್ಕಿ ಹೆಕ್ಕಿ ಕೊಲ್ಲಲು ಪ್ರಯತ್ನ ನಡೆಯುತ್ತಿದ್ದು, ಅವರ ರಕ್ಷಣೆಗಾಗಿ ಕೇಂದ್ರ ಸರಕಾರವು ಮಧ್ಯಪ್ರವೇಶ ಮಾಡುವುದು ಆವಶ್ಯಕವಾಗಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!