|

ಮುಂಬ್ರಾ (ಠಾಣೆ ಜಿಲ್ಲೆ) – ರಾಷ್ಟ್ರೀಯವಾದಿ ಕಾಂಗ್ರೆಸ ಶರದ ಪವಾರ್ ಬಣದ ಮುಂಬ್ರಾ-ಕಳವಾ ಅಧ್ಯಕ್ಷ ಶಮೀಮ ಖಾನ್ ಅವರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಈ ಪ್ರಕರಣದಲ್ಲಿ ಶಮೀಮ ಖಾನ್ ಅವರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ಶಮೀಮ ಖಾನ್ ಅವರು ಪಹಲ್ಗಾಮ್ ಆಕ್ರಮಣಕ್ಕೆ ಪ್ರತ್ಯುತ್ತರ ನೀಡಲು ಒಂಬತ್ತು ತಿಂಗಳ ಹಿಂದೆ ಮುಂಬ್ರಾದಲ್ಲಿ ಪಾಕಿಸ್ತಾನದ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದ್ದರು. ಅದರಲ್ಲಿ ಮಾಜಿ ಸಚಿವ ಮತ್ತು ಮುಂಬ್ರಾ-ಕಳವಾ ಶಾಸಕ ಜಿತೇಂದ್ರ ಆವ್ಹಾಡ ಅವರೊಂದಿಗೆ ಅನೇಕ ಕಾರ್ಯಕರ್ತರು ಮತ್ತು ಸ್ಥಳೀಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಮೀಮ ಖಾನ್ ಅವರು ‘ಪಾಕಿಸ್ತಾನ್ ಮುರ್ದಾಬಾದ್’ ಬದಲಿಗೆ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ನೀಡಿದರು. ಸ್ವಲ್ಪ ಸಮಯದ ನಂತರ ಇದು ಗಮನಕ್ಕೆ ಬಂದಾಗ, ಅವರು ‘ಪಾಕಿಸ್ತಾನ್ ಮುರ್ದಾಬಾದ್’ ಎಂದು ಘೋಷಣೆ ಕೂಗಿದರು. ಈ ವಿಡಿಯೋ ಸಧ್ಯ ದೊಡ್ಡ ಪ್ರಮಾಣದಲ್ಲಿ ಪ್ರಸಾರವಾಗುತ್ತಿದೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!