ಹೊಸ ಕ್ರಿಮಿನಲ್ ಕಾನೂನುಗಳ ಪ್ರದರ್ಶನ

ಮುಂಬಯಿ – ೨೦೧೩ ರಲ್ಲಿ ಅಪರಾಧಿಗಳ ಬಿಡುಗಡೆಯ ಪ್ರಮಾಣವು ೯೧% ರಷ್ಟಾಗಿತ್ತು. ಕೇವಲ ಶೇಕಡಾ ೯% ರಷ್ಟು ಅಪರಾಧಗಳಲ್ಲಿ ಮಾತ್ರ ಶಿಕ್ಷೆಯಾಗುತ್ತಿತ್ತು. ಕಳೆದ ೧೦ ವರ್ಷಗಳಲ್ಲಿ, ಅಪರಾಧಿಗಳಿಗೆ ಶಿಕ್ಷೆಯಾಗುವ ಪ್ರಮಾಣವು ಶೇಕಡಾ ೫೩% ರಷ್ಟಕ್ಕೆ ತಲುಪಿದೆ. ಹೊಸ ಕ್ರಿಮಿನಲ್ ಕಾನೂನುಗಳ ಕಾರಣದಿಂದಾಗಿ, ಅಪರಾಧಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಶೇಕಡಾ ೯೦% ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವೆಂಬರ್ ೧೯ ರಂದು ಆಜಾದ್ ಮೈದಾನದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಮಾಹಿತಿ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್, ಉಪ ಮುಖ್ಯಮಂತ್ರಿ ಅಜಿತ್ ಪವಾರ್, ರಾಜ್ಯ ಮುಖ್ಯ ಕಾರ್ಯದರ್ಶಿ ರಾಜೇಶ್ ಕುಮಾರ್ ಮತ್ತು ಪೊಲೀಸ್ ಮಹಾನಿರ್ದೇಶಕಿ ರಶ್ಮಿ ಶುಕ್ಲಾ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಈ ಪ್ರದರ್ಶನವು ನವೆಂಬರ್ ೨೩ ರವರೆಗೆ ಜನಸಾಮಾನ್ಯರಿಗಾಗಿ ತೆರೆದಿರುತ್ತದೆ.
ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮಾತು ಮುಂದುವರೆಸಿ, “ಬ್ರಿಟಿಷರು ಭಾರತೀಯರ ಮೇಲೆ ಆಳ್ವಿಕೆ ನಡೆಸಲು ಕಾನೂನುಗಳನ್ನು ರಚಿಸಿದ್ದರು. ಈ ಕಾನೂನುಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಾಗಿರಲಿಲ್ಲ. ಕಾಲಕ್ಕೆ ಅನುಗುಣವಾಗಿ ಈ ಕಾನೂನುಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಕ್ರಿಮಿನಲ್ ಕಾನೂನುಗಳ ಪ್ರಕಾರ, ಪ್ರಜಾಪ್ರಭುತ್ವದಲ್ಲಿ ಚುನಾಯಿತ ಸರಕಾರವು ಆಡಳಿತಗಾರರಾಗಿರದೆ ಧರ್ಮದರ್ಶಿಗಳಾಗಿದ್ದಾರೆ(ಟ್ರಸ್ಟಿಗಳು). ನ್ಯಾಯ ವ್ಯವಸ್ಥೆಯಲ್ಲಿಯೂ ಬದಲಾವಣೆಗಳಾಗುತ್ತಿವೆ. ಇನ್ನು ಮುಂದೆ ತಾರೀಖಿನ ಮೇಲೆ ತಾರೀಖು ಸಿಗುವುದಿಲ್ಲ. ನ್ಯಾಯಾಂಗದಲ್ಲಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಬಹುದು. ಇದರಿಂದ ತೀರ್ಪುಗಳು ಬೇಗನೆ ಸಿಗಬಹುದು. ಮಹಾರಾಷ್ಟ್ರದಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಪ್ರಯತ್ನಗಳು ನಡೆಯುತ್ತಿವೆ. ಮಹಾರಾಷ್ಟ್ರದ ಸೈಬರ್ ಮುಖ್ಯ ಕಛೇರಿ ದೇಶದಲ್ಲೇ ಅತ್ಯಂತ ಪ್ರಗತಿಪರ ಮುಖ್ಯ ಕಛೇರಿಯಾಗಿದೆ. ಭಾರತೀಯ ಸಾಕ್ಷ್ಯ ಸಂಹಿತೆಯಲ್ಲಿ ಡಿಜಿಟಲ್ ಮತ್ತು ಎಲೆಕ್ಟ್ರಿಕ್ ಸಾಕ್ಷ್ಯಗಳಿಗೆ ಮಾನ್ಯತೆ ನೀಡಲಾಗಿದೆ. ಇದರಿಂದ ಮೊಕದ್ದಮೆಗಳು ಬಾಕಿ ಉಳಿಯುವ ಪ್ರಮಾಣ ಕಡಿಮೆಯಾಗುತ್ತಿದೆ. ಅಪರಾಧಿಗಳ ಮಾಹಿತಿಯನ್ನು ಎಲ್ಲಾ ರಾಜ್ಯಗಳಿಗೆ ತಲುಪಿಸಲಾಗುತ್ತಿದೆ. ಮಾಹಿತಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ರಾಜ್ಯವು ದೇಶದಲ್ಲಿ ೨-೩ ನೇ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರದ ಪೊಲೀಸರು ವಿಶ್ವದ ಅತ್ಯುತ್ತಮ ಪೊಲೀಸರು ಎಂದು ಖ್ಯಾತಿ ಪಡೆಯುತ್ತಾರೆ” ಎಂದು ಫಡಣವೀಸ್ ವಿಶ್ವಾಸ ವ್ಯಕ್ತಪಡಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!