ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರದ ಮುಖ್ಯಮಂತ್ರಿ: ೨೬ ಮಂತ್ರಿಗಳೂ ಪ್ರಮಾಣ ವಚನ ಸ್ವೀಕರಿಸಿದರು – Nitish Kumar Bihar CM Again

ಪಾಟ್ಲಿಪುತ್ರ (ಬಿಹಾರ) – ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಮ್ರಾಟ್ ಚೌಧರಿ ಮತ್ತು ವಿಜಯ ಕುಮಾರ್ ಸಿನ್ಹಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಒಟ್ಟು ೨೬ ಶಾಸಕರು ಮಂತ್ರಿ ಸ್ಥಾನದ ಪ್ರಮಾಣ ವಚನ ಸ್ವೀಕರಿಸಿದರು. ಇದರಲ್ಲಿ ಭಾಜಪದ ೧೪, ನಿತೀಶ ಕುಮಾರ್ ಅವರ ಜನತಾ ದಳ (ಸಂಯುಕ್ತ) ಪಕ್ಷದ ೮, ಚಿರಾಗ್ ಪಾಸ್ವಾನ್ ಅವರ ಪಕ್ಷದ ೨ ಮಂತ್ರಿಗಳು, ರಾಷ್ಟ್ರೀಯ ಲೋಕಮೋರ್ಚಾ ಮತ್ತು ಹಿಂದುಸ್ತಾನಿ ಅವಾಮ್ ಮೋರ್ಚಾ ಪಕ್ಷಗಳ ತಲಾ ೧ ಮಂತ್ರಿ ಸೇರಿದ್ದಾರೆ. ಗಾಂಧಿ ಮೈದಾನದಲ್ಲಿ ನಡೆದ ಭವ್ಯ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಭಾಜಪ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.