
ನವದೆಹಲಿ – ಆಮದು ಸುಂಕಗಳು ಮತ್ತು ವ್ಯಾಪಾರ ಒಪ್ಪಂದಗಳ ಕುರಿತು ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಇರುವಾಗಲೇ, ಅಮೆರಿಕ, ಭಾರತಕ್ಕೆ ೭೭೫ ಕೋಟಿ ರೂಪಾಯಿ ಮೌಲ್ಯದ ಒಪ್ಪಂದ ಮಾಡಿಕೊಂಡಿದ್ದು ಕ್ಷಿಪಣಿಗಳು ಮತ್ತು ಫಿರಂಗಿಗಳನ್ನು ಮಾರಾಟ ಮಾಡಲಿದೆ. ಈ ಒಪ್ಪಂದದ ಪ್ರಕಾರ ೧೦೦ ‘ಜಾವೆಲಿನ್’ ಕ್ಷಿಪಣಿ ವ್ಯವಸ್ಥೆಗಳು ಮತ್ತು ೨೧೬ ಎಕ್ಸ್‌ಕ್ಯಾಲಿಬರ್ ಪ್ರೊಜೆಕ್ಟೈಲ್ ಸ್ಮಾರ್ಟ್ ಆರ್ಟಿಲರಿಗಳನ್ನು(ಫಿರಂಗಿಗಳು) ಅಮೆರಿಕ ಒದಗಿಸಲಿದೆ.
ಜಾವೆಲಿನ್’ ಕ್ಷಿಪಣಿಯ ವೈಶಿಷ್ಟ‘ಜಾವೆಲಿನ್’ ಇದೊಂದು ಟ್ಯಾಂಕ್ ವಿರೋಧಿ ಕ್ಷಿಪಣಿಯಾಗಿದ್ದು, ಟ್ಯಾಂಕ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಬಂಕರ್‌ಗಳನ್ನು ನಾಶ ಮಾಡಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಕ್ಷಿಪಣಿಯನ್ನು ಸೈನಿಕರು ತಮ್ಮ ಭುಜದಿಂದಲೂ ಸಹ ಹಾರಿಸಬಹುದಾಗಿದೆ. ಈ ಕ್ಷಿಪಣಿಯು ಉಷ್ಣತೆಯನ್ನು ಗುರುತಿಸಿ ಗುರಿಗಳ ಮೇಲೆ ದಾಳಿ ಮಾಡುತ್ತದೆ. ಈ ಕ್ಷಿಪಣಿಯು ೨,೫೦೦ ಮೀಟರ್ ದೂರದವರೆಗೆ ಗುರಿಯನ್ನು ಭೇದಿಸುವ ಸಾಮರ್ಥ್ಯ ಹೊಂದಿದೆ. ಹೊಗೆ, ಧೂಳು ಅಥವಾ ಪ್ರತಿಕೂಲ ಹವಾಮಾನದಲ್ಲಿಯೂ ಸಹ ಈ ಕ್ಷಿಪಣಿ ಗುರಿಗಳನ್ನು ಹೊಡೆಯುವ ಸಾಮರ್ಥ್ಯ ಹೊಂದಿದೆ. |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation