ನೂತನ ಮುಖ್ಯ ನ್ಯಾಯಮೂರ್ತಿಗಳ ಪ್ರಮಾಣ ವಚನ ಸಮಾರಂಭಕ್ಕೆ ೬ ದೇಶಗಳ ಮುಖ್ಯ ನ್ಯಾಯಮೂರ್ತಿಗಳ ಆಗಮನ! Chief Justice Surya Kant

ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ – ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನವೆಂಬರ್ ೨೪ ರಂದು ದೇಶದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಪ್ರಮಾಣ ವಚನ ಸಮಾರಂಭಕ್ಕೆ ಭೂತಾನ್, ಕೀನ್ಯಾ, ಮಲೇಷ್ಯಾ, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾ ಈ ೬ ದೇಶಗಳ ಮುಖ್ಯ ನ್ಯಾಯಾಧೀಶರು ತಮ್ಮ ಕುಟುಂಬಗಳೊಂದಿಗೆ ಭಾಗವಹಿಸಲಿದ್ದಾರೆ. ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ಮುಖ್ಯ ನ್ಯಾಯಮೂರ್ತಿಗಳ ಪ್ರಮಾಣ ವಚನ ಸಮಾರಂಭಕ್ಕೆ ಇತರ ದೇಶಗಳ ಮುಖ್ಯ ನ್ಯಾಯಾಧೀಶರು ಭಾಗವಹಿಸುತ್ತಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಅಧಿಕಾರಾವಧಿಯು ನವೆಂಬರ್ ೨೩ ರಂದು ಕೊನೆಗೊಳ್ಳಲಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಇವರ ಅಧಿಕಾರಾವಧಿ ೧೫ ತಿಂಗಳುಗಳು ಇರಲಿದೆ, ಅಂದರೆ ಅವರು ಫೆಬ್ರವರಿ ೯, ೨೦೨೭ ರಂದು ನಿವೃತ್ತರಾಗುತ್ತಾರೆ.