ನ್ಯಾಯಮೂರ್ತಿ ಸೂರ್ಯಕಾಂತ್ ಇಂದು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

ನವದೆಹಲಿ – ದೇಶದಲ್ಲಿ ಬಾಕಿ ಇರುವ ೫ ಕೋಟಿಗೂ ಹೆಚ್ಚು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಯ ಮುಂದಿರುವ ದೊಡ್ಡ ಸವಾಲಾಗಿದೆ. ಈ ಬಾಕಿ ಇರುವ ಪ್ರಕರಣಗಳನ್ನು ಗುರುತಿಸುವುದು ಮತ್ತು ವಿವಾದಗಳನ್ನು ಪರಿಹರಿಸಲು ಮಧ್ಯಸ್ಥಿಕೆಯನ್ನು ಉತ್ತೇಜಿಸುವುದು ಈ ಎರಡು ಪ್ರಮುಖ ಆದ್ಯತೆಗಳಾಗಿರುತ್ತವೆ ಎಂದು ನಾಳೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನ್ಯಾಯಮೂರ್ತಿ ಸೂರ್ಯಕಾಂತ ಅವರು ತಿಳಿಸಿದ್ದಾರೆ.
ನ್ಯಾಯಮೂರ್ತಿ ಸೂರ್ಯಕಾಂತ ಅವರು,
೧. ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ ೯೦ ಸಾವಿರಕ್ಕಿಂತ ಹೆಚ್ಚಾಗಿದೆ. ಇದು ಹೇಗೆ ಸಂಭವಿಸಿತು ಅಥವಾ ಯಾರು ಜವಾಬ್ದಾರರು ಎಂಬುದನ್ನು ನಾನು ತನಿಖೆ ಮಾಡುವುದಿಲ್ಲ.
೨. ಎರಡನೇ ವಿಷಯವೆಂದರೆ ಮಧ್ಯಸ್ಥಿಕೆ, ಇದು ವಿವಾದಗಳನ್ನು ಬಗೆಹರಿಸಲು ಇರುವ ಸುಲಭ ವಿಧಾನಗಳಲ್ಲಿ ಒಂದಾಗಿದೆ ಮತ್ತು ಮಧ್ಯಸ್ಥಿಕೆಯು ನಿಜವಾಗಿಯೂ ನಿರ್ಣಾಯಕ ಪಾತ್ರ ವಹಿಸಬಹುದು.
೩. ದೇಶದಲ್ಲಿ ಮಧ್ಯಸ್ಥಿಕೆ ಕುರಿತಾದ ಜಾಗೃತಿ ವೇಗವಾಗಿ ಹೆಚ್ಚುತ್ತಿದೆ. ಇತ್ತೀಚೆಗೆ ಭಾರತದ ದೊಡ್ಡ ಖಾಸಗಿ ಸಂಸ್ಥೆಗಳು, ಬ್ಯಾಂಕ್‌ಗಳು ಮತ್ತು ವಿಮಾ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ದೀರ್ಘಕಾಲದ ಮೊಕದ್ದಮೆಗಳಿಂದ ರಕ್ಷಿಸಲು ಮಧ್ಯಸ್ಥಿಕೆ ತರಬೇತಿಗಾಗಿ ವಿನಂತಿಸಿವೆ.
೪. ದೇಶಾದ್ಯಂತ ಇರುವ ಉಚ್ಚ ನ್ಯಾಯಾಲಯಗಳು ಮತ್ತು ಕಿರಿಯ ನ್ಯಾಯಾಲಯಗಳಿಂದ ಬಾಕಿ ಇರುವ ಮೊಕದ್ದಮೆಗಳ ಕುರಿತಾದ ವಿವರವಾದ ವರದಿಯನ್ನು ತರಿಸಿಕೊಳ್ಳಲಾಗುವುದು. ಸರ್ವೋಚ್ಚ ನ್ಯಾಯಾಲಯದ ದೊಡ್ಡ ಸಾಂವಿಧಾನಿಕ ಪೀಠದಿಂದ ಇತ್ಯರ್ಥಗೊಳ್ಳಲಿರುವ ಬಾಕಿ ಪ್ರಕರಣಗಳ ಬಗ್ಗೆ ಉಚ್ಚ ನ್ಯಾಯಾಲಯಗಳನ್ನು ಕೇಳಲಾಗುವುದು.
೫. ಕೃತಕ ಬುದ್ಧಿಮತ್ತೆ ಕುರಿತು ಎಚ್ಚರಿಕೆ ವಹಿಸಲು ಅದರ ದುಷ್ಪರಿಣಾಮಗಳು ಮತ್ತು ಪರಿಹಾರ ಕ್ರಮಗಳನ್ನು ಅರ್ಥಮಾಡಿಕೊಳ್ಳುವುದು ಅವಶ್ಯಕವಾಗಿದೆ. ಕೃತಕ ಬುದ್ಧಿಮತ್ತೆಯು ನ್ಯಾಯಾಂಗ ಸಂಸ್ಥೆಗಳಿಗೆ ಮಹತ್ವದ ಪರಿಹಾರಗಳನ್ನು ನೀಡಬಲ್ಲದು; ಆದರೆ ಅದರ ಅಪಾಯಗಳನ್ನು ಅರ್ಥಮಾಡಿಕೊಂಡ ನಂತರವೇ ಅದರ ಬಳಕೆಯನ್ನು ಹೆಚ್ಚಿಸಬೇಕು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ