
ನಾಗಪುರ – ಮೊಬೈಲ್ ಫೋನ್ ಬಳಸಲು ನಿರಾಕರಿಸಿದ್ದರಿಂದ ಕು. ದಿವ್ಯಾ ಕೊಠಾರೆ (ವಯಸ್ಸು ೧೩) ಎಂಬ ವಿದ್ಯಾರ್ಥಿನಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಣಕಾಪುರದಲ್ಲಿರುವ ಜಯ ಭೋಲೆ ನಗರ ಪ್ರದೇಶದಲ್ಲಿ ನಡೆದಿದೆ. ಕು. ದಿವ್ಯಾ ೮ನೇ ತರಗತಿಯಲ್ಲಿ ಓದುತ್ತಿದ್ದಳು. ಅವಳು ನಿಯಮಿತವಾಗಿ ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮಗಳನ್ನು ಅತಿಯಾಗಿ ಬಳಸುತ್ತಿದ್ದ ಕಾರಣ ಪಾಠಗಳನ್ನು ನಿರ್ಲಕ್ಷಿಸುತ್ತಿದ್ದಳು. ಈ ಕಾರಣದಿಂದಾಗಿ ಆಕೆಯ ಕುಟುಂಬದವರು ‘ಮೊಬೈಲ್ ಬಳಕೆ ಕಡಿಮೆ ಮಾಡಿ ಅಧ್ಯಯನಕ್ಕೆ ಹೆಚ್ಚು ಗಮನ ನೀಡು’ ಎಂದು ನಿರಂತರವಾಗಿ ತಿಳಿಸಿ ಹೇಳುತ್ತಿದ್ದರು. ನವೆಂಬರ್ ೨೧ರಂದು, ಆಕೆಯ ಕುಟುಂಬದವರು ಅವಳಿಗೆ ಮೊಬೈಲ್ ಬಳಸಲು ಅವಕಾಶ ನೀಡದ ಕಾರಣ, ಅವಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಳು.
ಸಂಪಾದಕೀಯ ನಿಲುವುಬಾಲ್ಯದಿಂದಲೇ ತಂದೆ-ತಾಯಿ ಮಕ್ಕಳಿಗೆ ಧರ್ಮಶಿಕ್ಷಣ ನೀಡಿ ಸುಸಂಸ್ಕೃತರನ್ನಾಗಿ ಮಾಡಿದರೆ, ಇಂತಹ ಆತ್ಮಹತ್ಯೆಯ ಘಟನೆಗಳಿಗೆ ಕಡಿವಾಣ ಹಾಕಬಹುದು. ಇದಕ್ಕಾಗಿ ಮೊದಲು ಪೋಷಕರು ಧರ್ಮಶಿಕ್ಷಣ ಪಡೆದು ಸುಸಂಸ್ಕೃತರಾಗಬೇಕು! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!