|

ಬೆಂಗಳೂರು – ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗುಂಪುಗಳ ನಡುವೆ ಶಾಸಕರ ರಾಜಕೀಯ ಕುದುರೆ ವ್ಯಾಪಾರ ಆರಂಭವಾಗಿದೆ. ಇದರಲ್ಲಿ, ಕಾಂಗ್ರೆಸ್‌ನ ಆಂತರಿಕ ಎರಡೂ ಗುಂಪುಗಳು ಶಾಸಕರ ಖರೀದಿಗೆ ₹ 50 ಕೋಟಿ, ಒಂದು ‘ಫಾರ್ಚೂನರ್’ ಮತ್ತು ಒಂದು ಫ್ಲಾಟ್‌ನ ಆಮಿಷ ಒಡ್ಡುತ್ತಿವೆ. ಕೆಲವು ಶಾಸಕರು ₹ 75 ರಿಂದ ₹ 100 ಕೋಟಿಗಳ ಬೇಡಿಕೆಯನ್ನೂ ಇಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಶಾಸಕರಿಗೆ ಸಚಿವ ಸ್ಥಾನ ಬೇಕಿದ್ದರೆ, ಅವರಿಂದ ₹ 200 ಕೋಟಿಗಳ ಬೇಡಿಕೆ ಇಡಲಾಗುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರು ಮತ್ತು ಭಾಜಪ ಶಾಸಕರಾದ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಗಂಭೀರ ಆರೋಪವನ್ನು ಮಾಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರನ್ನು ಬಂಧಿಸಿ! – ಶಾಸಕ ನಾರಾಯಣಸ್ವಾಮಿ

ಸಚಿವ ಸ್ಥಾನ ಬೇಕಿರುವ ಶಾಸಕರಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರೇ ಖುದ್ದಾಗಿ ₹ 200 ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಶಾಸಕ ನಾರಾಯಣಸ್ವಾಮಿ ಹೇಳಿದ್ದಾರೆ. ಭ್ರಷ್ಟಾಚಾರ ಮತ್ತು ಆರ್ಥಿಕ ಅವ್ಯವಹಾರದ ಕುರಿತು ತಕ್ಷಣ ತನಿಖೆ ನಡೆಸಿ ಸುರ್ಜೇವಾಲಾ ಅವರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಜಾರಿ ನಿರ್ದೇಶನಾಲಯಕ್ಕೂ ಪತ್ರ ಬರೆಯುವುದಾಗಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ನಾರಾಯಣಸ್ವಾಮಿ ಅವರು, ಕಾಂಗ್ರೆಸ್ ಸರಕಾರವು ಜನರ ಹಣವನ್ನು ಲೂಟಿ ಮಾಡಿ ಶಾಸಕರ ಖರೀದಿಯ ಆಟವಾಡುತ್ತಿದೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ್ದು, ಜನರೇ ಈ ಉದ್ಧಟತನಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಸಂಪಾದಕೀಯ ನಿಲುವುಕಾಂಗ್ರೆಸ್ನ ಭ್ರಷ್ಟಾಚಾರದ ಕರಾಳ ಇತಿಹಾಸವನ್ನು ನೋಡಿದರೆ, ಈ ಆರೋಪಗಳಲ್ಲಿ ಸತ್ಯಾಂಶವಿರುವ ಸಾಧ್ಯತೆಯನ್ನು ಯಾರು ತಳ್ಳಿಹಾಕಿಯಾರು? ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಕಾಂಗ್ರೆಸ್ ಅನ್ನು ನಿಷೇಧಿಸುವುದು ಒಂದೇ ಪರಿಹಾರವಾಗಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!