ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಮಾಹಿತಿ

ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಪ್ರಕರಣದ ನಿರ್ಧಾರ ಪಕ್ಷದ ‘ಹೈಕಮಾಂಡ್’ (ಸರ್ವೋಚ್ಚ ನಾಯಕತ್ವ) ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. “ನಾನು ಈ ಬಗ್ಗೆ ಏನನ್ನೂ ಹೇಳಲು ಬಯಸುವುದಿಲ್ಲ” ಎಂದಿದ್ದಾರೆ.
ನವೆಂಬರ್ 22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ನಂತರ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಖರ್ಗೆ ಹೇಳಿಕೆ ಪ್ರಕಾರ, ಏನೇ ಆದರೂ, ಅದನ್ನು ‘ಹೈಕಮಾಂಡ್’ ಮಾಡುತ್ತದೆ. ನಿಮಗೆ ಚಿಂತಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಮತ್ತೊಂದೆಡೆ ಸಿದ್ದರಾಮಯ್ಯ ಮಾತನಾಡಿ, ನಾನು ‘ಹೈಕಮಾಂಡ್’ ನಿರ್ಧಾರವನ್ನು ಪಾಲಿಸುತ್ತೇನೆ. ಎಲ್ಲರೂ ಅದನ್ನೇ ಮಾಡಬೇಕು, ಎಂದು ಹೇಳಿದ್ದಾರೆ. ಆದಾಗ್ಯೂ ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ ಅವರು ರಾಜ್ಯದಲ್ಲಿ ನಾಯಕತ್ವ ಬದಲಾದರೆ, ತಾನು ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿರುವುದಾಗಿ ಹೇಳಿದ್ದಾರೆ.
ಭಾಜಪದಿಂದ ತಿರುಗೇಟು !
ಈ ಹೇಳಿಕೆಯಿಂದ ಭಾಜಪ ಶಾಸಕ ಸುರೇಶ್ ಕುಮಾರ್ ಅವರು ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು, ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ‘ಹೈಕಮಾಂಡ್’ ಅಲ್ಲದಿದ್ದರೆ, ನಿಜವಾಗಿ ‘ಹೈಕಮಾಂಡ್’ ಯಾರು?” ಎಂದು ಪ್ರಶ್ನಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!