
ಕಾಬುಲ್ (ಅಫ್ಘಾನಿಸ್ತಾನ) – ಪಾಕಿಸ್ತಾನ ಪುನಃ ಒಮ್ಮೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ 10 ನಾಗರಿಕರು ಬಲಿಯಾಗಿದ್ದಾರೆ. ವಿಶೇಷವಾಗಿ, ಮೃತರಾದವರಲ್ಲಿ 9 ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದ್ದಾರೆ. ಈ ದಾಳಿ ನವೆಂಬರ್ 24 ರ ಮಧ್ಯರಾತ್ರಿ ನಡೆದಿದೆ. ಈ ಬಗ್ಗೆ ಪಾಕಿಸ್ತಾನದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಪಾಕಿಸ್ತಾನದ ಅರೆಸೈನಿಕ ಪಡೆಯ ಪ್ರಧಾನ ಕಚೇರಿಯ ಮೇಲೆ ನಡೆದ ಆತ್ಮಹತ್ಯಾ ದಾಳಿಯ ನಂತರ ಪಾಕಿಸ್ತಾನದ ಪ್ರತಿದಾಳಿ ನಡೆಸಿದೆ.
ಖೋಸ್ತ ಪ್ರಾಂತ್ಯದ ಗರಬಜ ಜಿಲ್ಲೆಯ ಮುಗಲಗೈ ಪ್ರದೇಶದಲ್ಲಿ ಒಂದು ಮನೆಯ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ. ಇದರಲ್ಲಿ ಇಡೀ ಮನೆ ನಾಶವಾಯಿತು. ಕುನಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿಯೂ ಪಾಕಿಸ್ತಾನ ದಾಳಿ ನಡೆಸಿದೆ. ಅಲ್ಲಿ 4 ನಾಗರಿಕರು ಗಾಯಗೊಂಡಿದ್ದಾರೆ
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation