|

ಸೀಹೋರ (ಮಧ್ಯಪ್ರದೇಶ) – ಇಲ್ಲಿರುವ ವಿಐಟಿ (ವೆಲ್ಲೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ವಿಶ್ವವಿದ್ಯಾಲಯದಲ್ಲಿ ನವೆಂಬರ್ 25 ರ ರಾತ್ರಿ ವಿದ್ಯಾರ್ಥಿಗಳಿಂದ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯಿತು. ಅವರು ವಿಶ್ವವಿದ್ಯಾಲಯದ ಆವರಣದಲ್ಲಿ ಧ್ವಂಸ ಕೃತ್ಯ ನಡೆಸಿ ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದರು. ಹಾಗೆಯೇ, ಕುಲಪತಿಗಳ ಬಂಗಲೆಯ ಆವರಣವನ್ನೂ ಧ್ವಂಸ ಮಾಡಲಾಯಿತು. ಈ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿರುವ 24 ವಿದ್ಯಾರ್ಥಿಗಳಿಗೆ ಕಾಮಾಲೆಯಾಗಿದ್ದರಿಂದ, ಅಲ್ಲಿನ ದುರವಸ್ಥೆಯ ಬಗ್ಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಈ ಹಿಂಸಾಚಾರ ನಡೆಸಿದ್ದಾರೆ. ಅಲ್ಲಿ ನೀಡುತ್ತಿರುವ ಊಟದ ಗುಣಮಟ್ಟ ಕೆಟ್ಟದಾಗಿದ್ದರಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿದ್ದಾರೆ ಎಂದು ಅವರು ದೂರುತ್ತಿದ್ದರು.
4 ಸಾವಿರ ವಿದ್ಯಾರ್ಥಿಗಳಿಂದ ಹಿಂಸಾಚಾರ
1. ರಾತ್ರಿ ಸುಮಾರು 4 ಸಾವಿರ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಒಗ್ಗೂಡಿದ್ದರು. ಅವರು ಬಸ್, ನಾಲ್ಕು ಚಕ್ರದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದರು. ಇದರಿಂದಾಗಿ ಸುತ್ತಮುತ್ತಲಿನ 5 ಪೊಲೀಸ್ ಠಾಣೆಗಳ ಪೊಲೀಸ್ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು.
2. ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ವಿಶ್ವವಿದ್ಯಾಲಯದ ಆವರಣಕ್ಕೆ ತಲುಪಿದರು. ಬೆಂಕಿ ಹಚ್ಚಿದ ನಂತರ ಒಂದೂವರೆ ಕಿಲೋಮೀಟರ್ ದೂರದವರೆಗೆ ಹೊಗೆಯ ಸುರುಳಿಗಳು ಗೋಚರಿಸುತ್ತಿದ್ದವು. ಅಗ್ನಿಶಾಮಕ ದಳವು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಿತು. ಈ ಹಿಂಸಾಚಾರದ ನಂತರ ಅನೇಕ ವಿದ್ಯಾರ್ಥಿಗಳು ತಮ್ಮ ಮನೆಗಳಿಗೆ ಮರಳಲು ಪ್ರಾರಂಭಿಸಿದ್ದಾರೆ. ಸಧ್ಯ ವಿದ್ಯಾರ್ಥಿಗಳಿಗೆ 5 ದಿನಗಳ ರಜೆಯನ್ನು ನೀಡಲಾಗಿದೆ.
3. ಪೊಲೀಸ್ ಅಧೀಕ್ಷಕ ದೀಪಕ ಕುಮಾರ ಶುಕ್ಲಾ ಅವರು ಮಾತನಾಡಿ, ನಾವು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದೇವೆ. ಆಹಾರ ಮತ್ತು ಔಷಧ ಆಡಳಿತವು ಹಾಸ್ಟೆಲ್ ನಲ್ಲಿ ನೀಡಲಾಗುವ ಊಟದ ಮಾದರಿಗಳನ್ನು ಪರಿಶೀಲಿಸಲಿದೆ, ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!