ರಾವಲ್ಪಿಂಡಿ (ಪಾಕಿಸ್ತಾನ): ಆದಿಯಾಲಾ ಜೈಲು ಆಡಳಿತದಿಂದ ಮಾಹಿತಿ

ರಾವಲ್ಪಿಂಡಿ (ಪಾಕಿಸ್ತಾನ) – ಆದಿಯಾಲಾ ಜೈಲಿನಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ವದಂತಿಗಳಿಂದಾಗಿ, ನವೆಂಬರ್ 26 ರಂದು ಖಾನ್ ಅವರ ಪಕ್ಷದ ಸಾವಿರಾರು ಕಾರ್ಯಕರ್ತರು ಜೈಲಿನ ಹೊರಗೆ ಜಮಾಯಿಸಿದ್ದರು. ಜೈಲು ಆಡಳಿತ ಅಥವಾ ಸರಕಾರ ಇಮ್ರಾನ್ ಖಾನ್ ಅವರ ಕುರಿತು ಯಾವುದೇ ಮಾಹಿತಿ ನೀಡಲಿಲ್ಲ. ಇದರಿಂದಾಗಿ ರಾವಲ್ಪಿಂಡಿಯಲ್ಲಿ ದೊಡ್ಡ ಮಟ್ಟದ ಉದ್ವಿಗ್ನತೆ ಉಂಟಾಗಿತ್ತು. ಜೈಲು ಆಡಳಿತವು ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿ, ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಆರೋಗ್ಯ ಉತ್ತಮವಾಗಿದೆ ಮತ್ತು ಅವರು ಜೈಲಿನಲ್ಲೇ ಇದ್ದಾರೆ ಎಂದು ತಿಳಿಸಿದೆ.
1. ಜೈಲು ಆಡಳಿತವು , ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತಾದ ಸುದ್ದಿ ನಿರಾಧಾರವಾಗಿದೆ ಮತ್ತು ಅವರಿಗೆ ಎಲ್ಲಾ ರೀತಿಯ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದಿದೆ. ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಇಮ್ರಾನ್ ಖಾನ್ ಅವರನ್ನು ಆದಿಯಾಲಾ ಜೈಲಿನಿಂದ ಬೇರೆಲ್ಲೂ ಸ್ಥಳಾಂತರಿಸಿಲ್ಲ ಎಂದು ತಿಳಿಸಿದೆ.
2. ಇಮ್ರಾನ್ ಅವರಿಗೆ ಹಿಂದೆಂದೂ ಜೈಲಿನಲ್ಲಿ ಸಿಗದಂತಹ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಹೇಳಿದ್ದಾರೆ.
3. ಇಮ್ರಾನ್ ಖಾನ್ ಅವರು ಭ್ರಷ್ಟಾಚಾರದ ಆರೋಪಗಳಿಂದಾಗಿ ಕಳೆದ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid