ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಿಲುಕಿಸುವ ಬೆದರಿಕೆ

ಭೋಪಾಳ – ಜನರಿಗೆ ದೂರವಾಣಿ ಕರೆ ಮಾಡಿ, ಭಯೋತ್ಪಾದಕ ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಬೆದರಿಸಿ ಅವರಿಂದ ಹಣ ಸುಲಿಗೆ ಮಾಡಲು ಸೈಬರ್ ಅಪರಾಧಿಗಳು ಪ್ರಯತ್ನಿಸುತ್ತಿರುವ ಘಟನೆಗಳು ಮುನ್ನೆಲೆಗೆ ಬಂದಿವೆ. ಇಂತಹ ಒಂದು ವಂಚನೆಯ ಪ್ರಕರಣದಲ್ಲಿ, ಸೈಬರ್ ಅಪರಾಧಿಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ ನಂತರ, ಭೋಪಾಳದ ವಕೀಲರಾದ ೬೮ ವರ್ಷದ ಶಿವಕುಮಾರ್ ವರ್ಮಾ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
೧. ವಕೀಲ ವರ್ಮಾ ಅವರು ಬರೆದಿದ್ದ ಒಂದು ಪತ್ರವು ಪೊಲೀಸರಿಗೆ ಲಭ್ಯವಾಗಿದೆ. ಅದರಲ್ಲಿ ಅವರು, ಪಹಲ್ಗಾಮ್ ಭಯೋತ್ಪಾದಕ ಆಕ್ರಮಣದೊಂದಿಗೆ ತಮ್ಮ ಹೆಸರನ್ನು ಜೋಡಿಸುವ ಬೆದರಿಕೆಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ.
೨. ತಮ್ಮ ಹೆಸರಿನಲ್ಲಿ ಒಂದು ಬ್ಯಾಂಕ್ ಖಾತೆಯನ್ನು ತೆರೆಯಲಾಗಿದ್ದು, ಅದನ್ನು ಪಹಲ್ಗಾಮ್ ಭಯೋತ್ಪಾದಕ ಆಕ್ರಮಣದ ಆರೋಪಪಟ್ಟಿಯಲ್ಲಿ ನಮೂದಿಸಲಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
೩. ಭೋಪಾಳದ ಪೊಲೀಸ್ ಆಯುಕ್ತ ಹರಿನಾರಾಯಣ ಮಿಶ್ರಾ ಅವರು, ಸೈಬರ್ ವಂಚಕರು ವರ್ಮಾ ಅವರನ್ನು ಸಂಪರ್ಕಿಸಿ, ಅವರ ಬ್ಯಾಂಕ್ ಖಾತೆಯಿಂದ ‘ಸಂದೇಹಾಸ್ಪದ ವ್ಯವಹಾರ’ ನಡೆದಿದೆ ಮತ್ತು ಅವರು ‘ಗಂಭೀರ ಅಪರಾಧ’ ಎಸಗಿದ್ದಾರೆಂದು ನಂಬಿಸುವ ಪ್ರಯತ್ನ ಮಾಡಿದ್ದಾರೆ. ಇದರಿಂದ ವರ್ಮಾ ಗಾಬರಿಗೊಂಡು ಇಂತಹ ತೀವ್ರ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
ಸಂಪಾದಕೀಯ ನಿಲುವುಜನರ ಆರ್ಥಿಕ ವಂಚನೆ ಮಾಡುತ್ತಿದ್ದ ಸೈಬರ್ ಅಪರಾಧಿಗಳು ಈಗ ಜನರನ್ನು ಲೂಟಿ ಮಾಡಲು ಇಸ್ಲಾಮಿಕ್ ಭಯೋತ್ಪಾದನೆಯನ್ನು ಬಳಸುತ್ತಿದ್ದಾರೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ಇಂತಹ ಅಪರಾಧಿಗಳಿಗೆ ಪೊಲೀಸರು ತಕ್ಕ ಪಾಠ ಕಲಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!