
ತಿರುಪತಿ (ಆಂಧ್ರಪ್ರದೇಶ) – ಸುಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ ಲಡ್ಡು ಮಹಾಪ್ರಸಾದದ ಕಲಬೆರಕೆ ಪ್ರಕರಣದಲ್ಲಿ ವಿಶೇಷ ತನಿಖಾ ದಳವು ದೇವಸ್ಥಾನದ ಹಿರಿಯ ಅಧಿಕಾರಿ ಆರ್.ಎಸ್.ಎಸ್. ವಿ.ಆರ್. ಸುಬ್ರಹ್ಮಣ್ಯಂ ಅವರನ್ನು ಬಂಧಿಸಿದೆ. ಇವರು ೨೦೧೯ ರಿಂದ ೨೦೨೪ ರ ಅವಧಿಯಲ್ಲಿ ತಿರುಪತಿಯಲ್ಲಿ ಮಹಾ ವ್ಯವಸ್ಥಾಪಕರಾಗಿದ್ದರು (ಖರೀದಿ ವಿಭಾಗ) ಈ ಅವಧಿಯಲ್ಲಿ ತುಪ್ಪ, ಗೋಡಂಬಿ, ಏಲಕ್ಕಿ ಮುಂತಾದ ನೂರಾರು ಕೋಟಿ ರೂಪಾಯಿ ಮೌಲ್ಯದ ಕಚ್ಚಾವಸ್ತುಗಳ ಖರೀದಿಯು ಇವರ ಅಧೀನದಲ್ಲಿ ಮಾಡಲಾಗುತ್ತಿತ್ತು. ಇವರ ಬಂಧನದಿಂದಾಗಿ, ಲಡ್ಡು ಹಗರಣವು ಕೇವಲ ಹೊರಗಿನ ಪೂರೈಕೆದಾರರಿಗೆ ಮಾತ್ರ ಸೀಮಿತವಾಗಿರದೆ, ದೇವಸ್ಥಾನದ ಒಳಗಿನ ಅಧಿಕಾರಿಗಳ ಸಹಭಾಗಿತ್ವವೂ ಇದರಲ್ಲಿತ್ತು ಎಂಬುದು ಸ್ಪಷ್ಟವಾಗಿದೆ.
ದೇವಸ್ಥಾನದಲ್ಲಿನ ಕೆಲವು ಅಧಿಕಾರಿಗಳು ಭಾಗಿಯಾಗದೇ ಇದ್ದಿದ್ದರೆ, ಇಷ್ಟು ದೊಡ್ಡ ಪ್ರಮಾಣದಲ್ಲಿ ಕಲಬೆರಕೆ ಮಾಡುವುದು ಸಾಧ್ಯವಿರಲಿಲ್ಲ ಎಂದು ತನಿಖಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಸಂಪಾದಕೀಯ ನಿಲುವುದೇವಸ್ಥಾನದ ಪ್ರಸಾದದಲ್ಲಿ ಭ್ರಷ್ಟಾಚಾರ ಮಾಡುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು! |
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್