|

ಶ್ರೀನಗರ (ಜಮ್ಮು- ಕಾಶ್ಮೀರ) – ಜಮ್ಮು-ಕಾಶ್ಮೀರದ ೫ ಜಿಲ್ಲೆಗಳಲ್ಲಿ ಪೊಲೀಸರು ನಿಷೇಧಿತ ಭಯೋತ್ಪಾದಕ ಸಂಘಟನೆ ‘ಜಮಾತ್-ಎ-ಇಸ್ಲಾಮಿ’ಯ ಅನೇಕ ನೆಲೆಗಳ ಮೇಲೆ ದಾಳಿ ನಡೆಸಿದ್ದಾರೆ. ಕಣಿವೆಯಲ್ಲಿ ನಡೆಯುತ್ತಿರುವ ಭದ್ರತಾ ಕಾರ್ಯಾಚರಣೆಯ ಭಾಗವಾಗಿ ಶೋಪಿಯಾ, ಪುಲ್ವಾಮಾ, ಶ್ರೀನಗರ, ಬಾರಾಮುಲ್ಲಾ ಮತ್ತು ಕುಲ್ಗಾಮ್‌ಗಳಲ್ಲಿ ನವೆಂಬರ್ ೨೮ ರಂದು ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ‘ಜಮಾತ್-ಎ-ಇಸ್ಲಾಮಿ’ಗೆ ಸಂಬಂಧಿಸಿದ ಹಲವು ಜನರ ನೆಲೆಗಳ ಮೇಲೆ ಈ ದಾಳಿಗಳನ್ನು ನಡೆಸಲಾಗಿದೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ, ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ ಆರೋಪದ ಮೇಲೆ ೧೯ ವರ್ಷದ ಯುವ ಭಯೋತ್ಪಾದಕನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಹಲವಾರು ದಾಖಲೆಗಳ ಜೊತೆಗೆ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು, ಬಂಧಿತ ಭಯೋತ್ಪಾದಕನು ಪಾಕಿಸ್ತಾನ ಸೇರಿದಂತೆ ಅನೇಕ ವಿದೇಶಿ ಮೊಬೈಲ್ ಸಂಖ್ಯೆಗಳೊಂದಿಗೆ ನಿರಂತರವಾಗಿ ಮಾತನಾಡುತ್ತಿದ್ದನು ಎಂದು ತಿಳಿಸಿದ್ದಾರೆ. ಅವನು ಭಯೋತ್ಪಾದಕನಾಗಿ ಬದಲಾಗಿದ್ದು ಮತ್ತು ಭಯೋತ್ಪಾದಕ ದಾಳಿಯ ಯೋಜನೆಯನ್ನು ರೂಪಿಸುತ್ತಿದ್ದನು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!