(ಪ್ರಿಸ್ತ್ರಿಪ್ಷನ್ ಅಂದರೆ ಆಧುನಿಕ ವೈದ್ಯರು ಬರೆದುಕೊಟ್ಟ ಔಷಧ)

ನದ ದೆಹಲಿ – ದೇಶಾದ್ಯಂತ ಇರುವ ಔಷಧ ಮಾರಾಟಗಾರರು ಇನ್ನು ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಮಾರಾಟ ಮಾಡುವಂತಿಲ್ಲ ಎಂದು ಕೇಂದ್ರ ಸರಕಾರವು ಆದೇಶಿಸಿದೆ. ಇದರಿಂದಾಗಿ ದೇಶಾದ್ಯಂತ ಕಫ್ ಸಿರಪ್ ಸುಲಭವಾಗಿ ಸಿಗುವುದಿಲ್ಲ. ಇಲ್ಲಿಯವರೆಗೆ ಹೆಚ್ಚಿನ ಕಫ್ ಸಿರಪ್‌ಗಳನ್ನು ನೇರವಾಗಿ ಮಾರಾಟ ಮಾಡಲಾಗುತ್ತಿತ್ತು; ಆದರೆ ಸರಕಾರದ ಈ ಹೊಸ ನಿರ್ಧಾರದಿಂದಾಗಿ ಈ ಪದ್ಧತಿಗೆ ಕಡಿವಾಣ ಬೀಳಲಿದೆ. ಕೆಲವು ದಿನಗಳ ಹಿಂದೆ ಮಧ್ಯಪ್ರದೇಶದ ಛಿಂದ್ವಾಡ ಮತ್ತು ಸುತ್ತ-ಮುತ್ತಲಿನ ಜಿಲ್ಲೆಗಳಲ್ಲಿ ‘ಕೋಲ್ಡ್ರಿಫ್’ ಸಿರಪ್ ಸೇವನೆಯಿಂದ ಕಿಡ್ನಿ ವೈಫಲ್ಯವಾಗಿ ಕನಿಷ್ಠ 24 ಮಕ್ಕಳು ಸಾವನ್ನಪ್ಪಿದ್ದರು. ರಾಜಸ್ಥಾನ ಮತ್ತು ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಘಟನೆಗಳು ನಡೆದಿವೆ. ದೇಶದಲ್ಲಿ ಮತ್ತು ವಿದೇಶಗಳಲ್ಲಿಯೂ ಸಹ ಇಂತಹ ಘಟನೆಗಳು ಬೆಳಕಿಗೆ ಬಂದಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!