
ಚೆನ್ನೈ (ತಮಿಳುನಾಡು) – ಶ್ರೀಲಂಕಾದಲ್ಲಿ ವಿನಾಶವನ್ನುಂಟು ಮಾಡಿದ ನಂತರ, ‘ದಿತ್ವ’ ಚಂಡಮಾರುತವು ಭಾರತದ ಕಡೆಗೆ ವೇಗವಾಗಿ ಮುನ್ನುಗ್ಗುತ್ತಿದೆ. ಭಾರತದಲ್ಲಿನ ಹತ್ತಿರದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಚೆನ್ನೈನಿಂದ ೫೪ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಚಂಡಮಾರುತದ ಕಾರಣದಿಂದ ಪುದುಚೇರಿ ಕೇಂದ್ರೀಯ ವಿಶ್ವವಿದ್ಯಾಲಯವು ನವೆಂಬರ್ ೨೯ ರಂದು ರಜೆ ಘೋಷಿಸಿದ್ದು, ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಪುದುಚೇರಿ, ಕಾರೈಕಲ್, ಮಾಹೆ ಮತ್ತು ಯಾನಂನ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು ಮುಂದಿನ ೨-೩ ದಿನಗಳವರೆಗೆ ಮುಚ್ಚಲ್ಪಡುತ್ತವೆ.
ಶ್ರೀಲಂಕಾದಲ್ಲಿ ಚಂಡಮಾರುತದಿಂದ ಹಾಹಾಕಾರ!

ಶ್ರೀಲಂಕಾದಲ್ಲಿ ‘ದಿತ್ವ’ ಚಂಡಮಾರುತದಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ೧೨೩ ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ೧೩೦ ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕಳೆದ ೩ ದಿನಗಳಿಂದ ಕೊಲಂಬೋ ವಿಮಾನ ನಿಲ್ದಾಣದಲ್ಲಿ ೩೦೦ ಭಾರತೀಯ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಇವರೆಲ್ಲರೂ ದುಬೈಯಿಂದ ಶ್ರೀಲಂಕಾ ಮಾರ್ಗವಾಗಿ ಭಾರತಕ್ಕೆ ಬರುವವರಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!