
ಶ್ರೀನಗರ (ಜಮ್ಮು-ಕಾಶ್ಮೀರ) – ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಿದೆ, ಎಂದು ಜಮ್ಮು-ಕಾಶ್ಮೀರದ ಉಚ್ಚ ನ್ಯಾಯಾಲಯವು ಒಂದು ಅರ್ಜಿಯ ವಿಚಾರಣೆ ವೇಳೆ ತೀರ್ಪು ನೀಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಿರುವುದರಿಂದ, ನಿಯಂತ್ರಣ ರೇಖೆಯ ಮೂಲಕ ಜಮ್ಮು-ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಡುವೆ ನಡೆಯುವ ಯಾವುದೇ ವ್ಯಾಪಾರವನ್ನು ಅಂತರ-ರಾಜ್ಯ ವ್ಯಾಪಾರ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಏನಿದು ಪ್ರಕರಣ?
ಶ್ರೀನಗರದ ರಾಜ್ಯ ಸರಕು ಮತ್ತು ಸೇವಾ ತೆರಿಗೆ ಅಧೀಕ್ಷಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಜಮ್ಮು-ಕಾಶ್ಮೀರದ ನಡುವೆ ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ಕಾರಣ ಕೇಳಿ ನೋಟಿಸ್‌ಗಳನ್ನು ಜಾರಿ ಮಾಡಿದ್ದರು. ಅದರ ಅಡಿಯಲ್ಲಿ ವ್ಯಾಪಾರಿಗಳಿಗೆ ೨೦೧೭ ರಿಂದ ೨೦೧೯ ರವರೆಗೆ ಗಡಿಯ ಮೂಲಕ ಮಾಡಿದ ಸರಕುಗಳ ಒಳಬರುವಿಕೆ ಮತ್ತು ಹೊರಹೋಗುವಿಕೆಗಾಗಿ ತೆರಿಗೆ ಪಾವತಿಸಲು ಕೇಳಲಾಗಿತ್ತು. ಈ ನೋಟಿಸ್‌ಗಳನ್ನು ಪ್ರಶ್ನಿಸಿ ವ್ಯಾಪಾರಿಗಳು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಮೇಲೆ ನ್ಯಾಯಾಲಯವು ಮೇಲಿನ ತೀರ್ಪನ್ನು ನೀಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!