
ಇಸ್ಲಾಮಾಬಾದ್ (ಪಾಕಿಸ್ತಾನ) – ಇಮ್ರಾನ್ ಖಾನ್ ಅವರ ಸಹೋದರಿಯರು ಭಾರತೀಯ ಮಾಧ್ಯಮಗಳಿಗೆ ಸಂದರ್ಶನ ನೀಡಿದಕ್ಕೆ ಪಾಕಿಸ್ತಾನದ ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತೀಯ ಸುದ್ದಿವಾಹಿನಿಗೆ ಹೋಗಿ ಪಾಕಿಸ್ತಾನವನ್ನು ಅವಮಾನಿಸುವುದು ಅತ್ಯಂತ ನಾಚಿಕೆಗೇಡಿನ ಸಂಗತಿ, ಎಂದು ಅವರು ಹೇಳಿದ್ದಾರೆ.
ಕಳೆದ ವಾರ, ಇಮ್ರಾನ್ ಖಾನ್ ಅವರ ಸಹೋದರಿಯರಾದ ಅಲೀಮಾ ಖಾನ್, ಡಾ. ಉಜ್ಮಾ ಖಾನ್ ಮತ್ತು ನುರೀನ್ ಖಾನ್ ಅವರು ಅಡಿಯಾಲಾ ಜೈಲಿನ ಹೊರಗೆ ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಇಮ್ರಾನ್ ಖಾನ್ ಅವರ ‘ಪಿಟಿಐ’ (ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್) ಪಕ್ಷದ ನಿಲುವು ಪಾಕಿಸ್ತಾನ ವಿರೋಧಿಯಾಗಿರುವುದರಿಂದ ಭಾರತೀಯ ಮಾಧ್ಯಮಗಳು ಅವರಿಗೆ ವೇದಿಕೆ ನೀಡುತ್ತಿವೆ ಎಂದು ತರಾರ್ ಹೇಳಿದ್ದಾರೆ. ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತು ವಿದೇಶಗಳಲ್ಲಿ ಹರಡಿರುವ ಹೇಳಿಕೆಗಳು ಕೇವಲ ರಾಜಕೀಯ ಪ್ರಚಾರ ಮಾತ್ರ. ಅವರು ಜೈಲಿನಲ್ಲಿ ವಿಶೇಷ ಸೌಲಭ್ಯಗಳೊಂದಿಗೆ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ತರಾರ್ ಹೇಳಿದ್ದಾರೆ.
ಸಂಪಾದಕೀಯ ನಿಲುವುಪಾಕಿಸ್ತಾನದ ಭಾರತ ವಿರೋಧಿ ದ್ವೇಷ ತಿಳಿಯಿರಿ! |
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಸ್ಪೋರ್ಟ್ನಿಂದ ಪೌರತ್ವ ಸಾಬೀತಾಗುವುದಿಲ್ಲ! – ಕೇಂದ್ರ ಸರಕಾರ
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!