
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಮತಾಂತರ ಮಾಡಿದ ನಂತರವೂ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಮುಂದುವರಿಸುವುದು ಸಂವಿಧಾನಕ್ಕೆ ಮಾಡುವ ವಂಚನೆಯಾಗಿದೆ ಎಂದು ಅಲಹಾಬಾದ ಉಚ್ಚ ನ್ಯಾಯಾಲಯವು ಮಹತ್ವದ ತೀರ್ಪನ್ನು ನೀಡಿದೆ. ‘ಇತರ ಧರ್ಮಕ್ಕೆ (ಕ್ರೈಸ್ತ ಧರ್ಮಕ್ಕೆ) ಮತಾಂತರಗೊಳ್ಳುವ ಜನರು ಪರಿಶಿಷ್ಟ ಜಾತಿಯ ಸ್ಥಾನಮಾನ ಪಡೆಯದಂತೆ ಎಚ್ಚರಿಕೆ ವಹಿಸಿ’ ಎಂದು ಉಚ್ಚ ನ್ಯಾಯಾಲಯವು ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆಯನ್ನೂ ನೀಡಿದೆ. ಉತ್ತರ ಪ್ರದೇಶದ ಮಹಾರಾಜಗಂಜದ ಜಿತೇಂದ್ರ ಸಹಾನಿ ಎಂಬಾತ ಹಿಂದೂ ದೇವತೆಗಳ ಅವಮಾನ ಮಾಡಿದ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪ್ರವೀಣ ಕುಮಾರ ಗಿರಿ ಅವರು ಈ ತೀರ್ಪು ನೀಡಿದರು.
🚨 Big Verdict from Allahabad HC 🚨
“SC Status After Conversion = Fraud on Constitution!”
The Allahabad High Court has ruled that continuing to claim Scheduled Caste (SC) status after converting to another religion (Christianity) is a fraud on the Constitution. ⚖️
🔹 Court… pic.twitter.com/VxjSc9bKPn
— Sanatan Prabhat (@SanatanPrabhat) December 3, 2025
1. ಅಲ್ಪಸಂಖ್ಯಾತರು ಮತ್ತು ಪರಿಶಿಷ್ಟ ಜಾತಿಗಳಿಗೆ ನೀ ಲಾಗುವ ಸ್ಥಾನಮಾನ ಹಾಗೂ ಅವುಗಳ ನಡುವಿನ ವ್ಯತ್ಯಾಸವನ್ನು ಎಲ್ಲರಿಗೂ ಸ್ಪಷ್ಟಪಡಿಸುವಂತೆ ಉಚ್ಚ ನ್ಯಾಯಾಲಯವು ಉತ್ತರ ಪ್ರದೇಶದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.
2. ಹಿಂದೂ, ಸಿಖ್ ಅಥವಾ ಬೌದ್ಧರನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮದ ವ್ಯಕ್ತಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ನೀಡಲು ಸಾಧ್ಯವಿಲ್ಲ ಎಂದೂ ಉಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ.
ಸಹಾನಿ ವಿರುದ್ಧ ಕೂಲಂಕಷ ತನಿಖೆಗೆ ಆದೇಶ
ಜಿತೇಂದ್ರ ಸಹಾನಿಯು ಹಿಂದೂ ದೇವತೆಗಳನ್ನು ಅವಮಾನಿಸಿದ್ದನು. ಸಹಾನಿಯು ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತನ್ನ ಧರ್ಮವನ್ನು ‘ಹಿಂದೂ ಧರ್ಮ’ ಎಂದು ಉಲ್ಲೇಖಿಸಿದ್ದನು. ಆದರೆ, ವಾಸ್ತವದಲ್ಲಿ ಅವನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾನೆ ಎಂಬುದು ಉಚ್ಚ ನ್ಯಾಯಾಲಯದ ಗಮನಕ್ಕೆ ಬಂದಿತು. ಆ ಸಮಯದಲ್ಲಿ ಉಚ್ಚ ನ್ಯಾಯಾಲಯವು, ‘ಸಹಾನಿಯು ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದಾನೆಯೇ ? ಎಂದು ಖಚಿತಪಡಿಸಿಕೊಳ್ಳಳು 3 ತಿಂಗಳೊಳಗೆ ಕೂಲಂಕಷ ತನಿಖೆ ನಡೆಸಬೇಕು’ ಎಂದು ಮಹಾರಾಜಗಂಜದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿತು. ಹಾಗೆಯೇ, ಅವನು ಮತಾಂತರ ಮಾಡಿ ಉಚ್ಚ ನ್ಯಾಯಾಲಯಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದರೆ, ಅವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಚ್ಚ ನ್ಯಾಯಾಲಯವು ಆದೇಶಿಸಿದೆ.
ಸಂಪಾದಕೀಯ ನಿಲುವುಇಂತಹ ವಂಚನೆ ಮಾಡಿ ಪರಿಶಿಷ್ಟ ಜಾತಿಗಳಿಗೆ ನೀಡಲಾಗುವ ಸೌಲಭ್ಯಗಳನ್ನು ಕಬಳಿಸುವವರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಅಪೇಕ್ಷಿಸುತ್ತಾರೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!