ಯಾವುದೇ ಮನುಷ್ಯ ಹಾನಿ ಸಂಭವಿಸಿಲ್ಲ

ಕೋತಾಗುಡೆಮ (ತೆಲಂಗಾಣ): ಇಲ್ಲಿನ ರೈಲು ನಿಲ್ದಾಣದ ಸಮೀಪ ಡಿಸೆಂಬರ್ 3 ರಂದು ಬೆಳಿಗ್ಗೆ ನಾಡಬಾಂಬ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಮನುಷ್ಯ ಹಾನಿ ಸಂಭವಿಸಿಲ್ಲ. ಬಾಂಬ್ ಸ್ಫೋಟದ ಘಟನೆಯಿಂದ ಈ ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಈ ಘಟನೆ ಭಯೋತ್ಪಾದನೆಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
1. ರೈಲು ನಿಲ್ದಾಣದ ಪರಿಸರದಲ್ಲಿ ಒಂದು ನಾಯಿಯು ಕಸದಲ್ಲಿದ್ದ ಒಂದು ಕಪ್ಪು ಬಣ್ಣದ ಚೀಲವನ್ನು ಬಾಯಲ್ಲಿ ಕಚ್ಚಿಕೊಂಡು ರೈಲು ಹಳಿಗಳ ದಿಕ್ಕಿಗೆ ಹೋಗಿದೆ. ನಾಯಿಯು ಚೀಲದಲ್ಲಿದ್ದ ಸ್ಫೋಟಕವನ್ನು ಕಚ್ಚುತ್ತಿದ್ದಂತೆಯೇ ಸ್ಫೋಟ ಸಂಭವಿಸಿ, ನಾಯಿಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಘಟನಾ ಸ್ಥಳವು ರೈಲ್ವೆ ಹಳಿಗಳ ಸಮೀಪ ಇದ್ದುದರಿಂದ, ಪೊಲೀಸರು ತಕ್ಷಣವೇ ಆ ಪ್ರದೇಶವನ್ನು ಬಂದ್ ಮಾಡಿ ತನಿಖೆ ಆರಂಭಿಸಿದ್ದಾರೆ. ಸ್ಫೋಟದ ಅವಶೇಷಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬಾಂಬ್ ನಿಷ್ಕ್ರಿಯ ದಳವೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
2. ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ, ಇದು ಕಾಡುಪ್ರಾಣಿಗಳ ಬೇಟೆಗಾರರು ಇರಿಸಿದ ನಾಡಬಾಂಬ್ ಆಗಿರಬಹುದು ಎಂದು ಅಂದಾಜಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರೋಹಿತ ರಾಜು ಅವರು, ಇದು ಭಯೋತ್ಪಾದಕ ಸ್ವರೂಪದ ಘಟನೆಯಲ್ಲ. ಯಾರೋ ಬೇಟೆಗಾಗಿ ತಂದಿದ್ದ ನಾಡಬಾಂಬ್ ಅನ್ನು ಕಸದಲ್ಲಿ ಎಸೆದಿರಬಹುದು. ನಾಯಿಯು ಕುತೂಹಲದಿಂದ ಅದನ್ನು ಬಾಯಲ್ಲಿ ಕಚ್ಚಿ ಹಿಡಿದಾಗ ಈ ಘಟನೆ ಸಂಭವಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಾಂಬ್ ಅನ್ನು ಯಾರು ಮತ್ತು ಎಲ್ಲಿ ಇಟ್ಟಿದ್ದರು ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ರೈಲು ನಿಲ್ದಾಣದ ಪ್ರದೇಶದಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!