
ನವದೆಹಲಿ – ಕಳೆದ ೧೫ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮುಂಬಯಿ-ಗೋವಾ ರಾಷ್ಟ್ರೀಯ ಹೆದ್ದಾರಿ ಯೋಜನೆ ಅಂತಿಮವಾಗಿ ನಿರ್ಣಾಯಕ ಹಂತಕ್ಕೆ ಬಂದಿದೆ. ೨೦೦೯ ರಲ್ಲಿ ಈ ಹೆದ್ದಾರಿಯ ನಿರ್ಮಾಣ ಕಾರ್ಯ ಪ್ರಾರಂಭವಾಗಿತ್ತು. ಇದರ ೮೯ ಪ್ರತಿಶತ ಭಾಗ ಪೂರ್ಣಗೊಂಡಿದೆ. ಈ ಮೊದಲು ೨೦೨೫ ಇದರ ಗಡುವಾಗಿತ್ತು. ವಿವಿಧ ಕಾರಣಗಳಿಂದಾಗಿ ವಿಳಂಬವಾಯಿತು. ಈಗ ಏಪ್ರಿಲ್ ೨೦೨೬ ರೊಳಗೆ ಈ ಹೆದ್ದಾರಿಯ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಡಿಸೆಂಬರ್ ೪ ರಂದು ಲೋಕಸಭೆಯಲ್ಲಿ ಮಾಹಿತಿ ನೀಡಿದರು. ಈ ಹೆದ್ದಾರಿಯ ಹೊಸ ಗಡುವನ್ನು ಘೋಷಿಸುವಾಗ ಅವರು ಇತರ ೨ ಹೆದ್ದಾರಿಗಳ ಬಗ್ಗೆಯೂ ಮಾಹಿತಿ ನೀಡಿದರು.
೧. ಮುಂಬಯಿ-ಗೋವಾ ಹೆದ್ದಾರಿಯು ಕೊಂಕಣದ ಮೂಲಕ ಹಾದುಹೋಗುತ್ತದೆ ಮತ್ತು ರಸ್ತೆಗಳು, ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳನ್ನು ಒಳಗೊಂಡಂತೆ ಇದನ್ನು ನಿರ್ಮಿಸಲಾಗಿದೆ. ಈ ಹೆದ್ದಾರಿಯು ಪನವೇಲ್, ರತ್ನಾಗಿರಿ, ಗೋವಾ ಸೇರಿದಂತೆ ಅನೇಕ ಗ್ರಾಮೀಣ ಪ್ರದೇಶಗಳನ್ನು ಸಹ ಸಂಪರ್ಕಿಸುತ್ತದೆ.
೨. ಸದ್ಯ ಮುಂಬಯಿಯಿಂದ ಗೋವಾ ಪ್ರಯಾಣಕ್ಕೆ ೧೨ ಗಂಟೆಗಳು ಬೇಕಾಗುತ್ತದೆ. ಈ ಸಮಯವನ್ನು ಅರ್ಧದಷ್ಟು ಕಡಿಮೆ ಮಾಡಬಹುದು. ೪೬೬ ಕಿ.ಮೀ. ಇರುವ ಈ ಹೆದ್ದಾರಿಗೆ ಸುಮಾರು ೭ ಸಾವಿರದ ೩೦೦ ಕೋಟಿ ರೂಪಾಯಿಗಳ ವೆಚ್ಚವನ್ನು ನಿರೀಕ್ಷಿಸಲಾಗಿದೆ.
೩. ಮಾಣಗಾಂವ್, ಇಂದಾಪುರ, ಪಾಲಿ, ಲಾಂಜಾ, ಕೋಲಾಡ್, ಚಿಪ್ಳೂಣ್ ಈ ಸ್ಥಳಗಳಲ್ಲಿ ಬೈಪಾಸ್, ಅಂಡರ್‌ಪಾಸ್ ಮತ್ತು ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಇದರಿಂದ ಈ ನಗರಗಳಿಗೆ ನೇರ ಸಂಪರ್ಕ ಸಾಧ್ಯವಾಗಲಿದೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!