ಪಾಕಿಸ್ತಾನದ ಸಿಂಧ್‌ನ ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಇಸ್ಲಾಂ ಸ್ವೀಕರಿಸುವಂತೆ ಒತ್ತಾಯ ! – Hindu Schoolgirls in Pakistan

  • ಇಸ್ಲಾಂಗೆ ಮತಾಂತರಗೊಳ್ಳಲು ನಿರಾಕರಿಸಿದ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಯಿತು!

  • ಸರಕಾರ ವಿಚಾರಣೆಗೆ ಆದೇಶ

ಕರಾಚಿ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಶಾಲೆಯೊಂದರಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಕೇಳಲಾಯಿತು. ಸರಕಾರವು ಘಟನೆಯ ತನಿಖೆಗೆ ಆದೇಶಿಸಿದೆ. ನವೆಂಬರ್ ಅಂತ್ಯದಲ್ಲಿ ಸಿಂಧ್‌ನ ಮಿರ್ಪುರ್ ಸಕ್ರೋದಲ್ಲಿರುವ ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿತ್ತು. ಈ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೂ ವಿದ್ಯಾರ್ಥಿಗಳ ಪೋಷಕರು ಘಟನೆಯ ಬಗ್ಗೆ ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಶಾಲೆಯ ಪ್ರಾಂಶುಪಾಲರು ಹಿಂದೂ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಇಸ್ಲಾಂಗೆ ಮತಾಂತರಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಅವರು ವರದಿ ಮಾಡಿದ್ದಾರೆ. ಹಿಂದೂ ವಿದ್ಯಾರ್ಥಿಗಳನ್ನು ಕಲ್ಮಾ (ಅಲ್ಲಾಹನನ್ನು ಸ್ತುತಿಸುವ ಹೇಳಿಕೆಗಳು) ಪಠಿಸುವಂತೆ ಒತ್ತಾಯಿಸಲಾಯಿತು ಮತ್ತು ಅವರ ಧರ್ಮವನ್ನು ಅಪಹಾಸ್ಯ ಮಾಡಲಾಯಿತು. ಇಸ್ಲಾಂಗೆ ಮತಾಂತರಗೊಳ್ಳಲು ಅಥವಾ ಕಲ್ಮಾ ಪಠಿಸಲು ನಿರಾಕರಿಸಿದ ವಿದ್ಯಾರ್ಥಿಗಳನ್ನು ಮನೆಗೆ ವಾಪಸ್ ಕಳುಹಿಸಲಾಯಿತು.

ಧಾರ್ಮಿಕ ವ್ಯವಹಾರಗಳ ರಾಜ್ಯ ಸಚಿವ ಖಿಸೋ ಮಲ್ ಖೈಲ್ ದಾಸ್ ಈ ಸಂಬಂಧ ಮನವಿ ಪ್ರಸಾರ ಮಾಡಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಪ್ರಾಂತೀಯ ಶಿಕ್ಷಣ ಸಚಿವರು ಆದೇಶಿಸಿದ್ದಾರೆ ಎಂದು ಅವರು ಸಂಸತ್ತಿನ ಮೇಲ್ಮನೆಗೆ ಮಾಹಿತಿ ನೀಡಿದರು.

ಸಂಪಾದಕೀಯ ನಿಲುವು

ಪಾಕಿಸ್ತಾನದಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಆಶ್ಚರ್ಯವೇನಿಲ್ಲ. ಮುಂದಿನ ಕೆಲವು ವರ್ಷಗಳಲ್ಲಿ, ಪಾಕಿಸ್ತಾನದಲ್ಲಿ ಒಬ್ಬ ಹಿಂದೂ ಕೂಡ ಉಳಿಯುವುದಿಲ್ಲ. ಅಲ್ಲಿಯವರೆಗೆ, ಇಂತಹ ಘಟನೆಗಳು ಸಂಭವಿಸುವುದು ಖಚಿತ. ಆದ್ದರಿಂದ, ಭಾರತ ಮತ್ತು ಪ್ರಪಂಚದಾದ್ಯಂತ ಹಿಂದೂಗಳು, ಅವರ ಸಂಸ್ಥೆಗಳು ಮತ್ತು ಸರಕಾರ ನಿಷ್ಕ್ರಿಯವಾಗಿವೆ ಎಂಬುದು ಚಿತ್ರಣವಾಗಿದೆ!