ಸಂಸದೆ ಪ್ರೊ. ಡಾ. (ಸೌ.) ಮೇಧಾ ಕುಲಕರ್ಣಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮಾಹಿತಿ ನೀಡಿ ಕ್ರಮ ಕೈಗೊಳ್ಳುವಂತೆ ಆಗ್ರಹ

ನವದೆಹಲಿ – ಪುಣೆಯ ಭಾಜಪ ಸಂಸದೆ ಪ್ರೊ. ಡಾ. (ಸೌ.) ಮೇಧಾ ಕುಲಕರ್ಣಿ ಅವರು ಇತ್ತೀಚೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಪುಣೆ ಕಂಟೋನ್ಮೆಂಟ್ ಪ್ರದೇಶದಲ್ಲಿ ಕೇಂದ್ರ ಸರಕಾರ ಮತ್ತು ಕಂಟೋನ್ಮೆಂಟ್ ಬೋರ್ಡ್‌ಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ವಕ್ಫ್ ಆಸ್ತಿ ಎಂದು ಘೋಷಿಸಿರುವ ಗಂಭೀರ ಪ್ರಕರಣವನ್ನು ಅವರ ಗಮನಕ್ಕೆ ತಂದರು.
ಸ್ಥಳೀಯ ನಿವಾಸಿಗಳಿಂದ ಈ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಇದರಲ್ಲಿ ಭೂಮಿ ನೋಂದಣಿ ಮಧ್ಯೆ ನಡೆದ ಅಕ್ರಮಗಳು, ಆಸ್ತಿಯ ಕಾನೂನು ಸ್ಥಿತಿಯನ್ನು ಬದಲಾಯಿಸುವುದು ಮತ್ತು ರಕ್ಷಣಾ ಸಚಿವಾಲಯದ ಭೂ ನಿರ್ವಹಣಾ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುವುದು ಮುಂತಾದ ಗಂಭೀರ ಆರೋಪಗಳು ಸೇರಿವೆ. ಈ ಪ್ರಕರಣದ ಬಗ್ಗೆ ತಕ್ಷಣ ಮತ್ತು ಕಾಲಮಿತಿಯಲ್ಲಿ ತನಿಖೆ ನಡೆಸಿ, ಈ ಅಕ್ರಮಗಳನ್ನು ನಿಯಂತ್ರಿಸಬೇಕು, ಭೂಮಿಯ ಕಾನೂನು ಬದ್ಧ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಪ್ರೊ. ಡಾ. (ಸೌ.) ಮೇಧಾ ಕುಲಕರ್ಣಿ ಅವರು ಈ ಸಮಯದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಒತ್ತಾಯಿಸಿದರು.
ಸಂಪಾದಕೀಯ ನಿಲುವುವಕ್ಫ್ ಮಂಡಳಿಯ ಮೂಲಕ ನಡೆಯುತ್ತಿರುವ ಈ ‘ಲ್ಯಾಂಡ್ ಜಿಹಾದ್’ನಿಂದ ಸರಕಾರ ಮತ್ತು ಸೇನೆಗೂ ಸಮಸ್ಯೆ ಆಗುತ್ತಿದ್ದು, ಈಗ ಸರಕಾರವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವುದು ಅವಶ್ಯಕವಾಗಿದೆ! |
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ