ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಹ ಸಿದ್ಧು ಅವರ ಪತ್ನಿಯ ಹೇಳಿಕೆ

ಚಂಡೀಗಢ – ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ₹೫೦೦ ಕೋಟಿ ರೂಪಾಯಿಗಳ ಅಗತ್ಯವಿದೆ ಎಂದು ಪಂಜಾಬ್ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಹ ಸಿದ್ಧು ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿದ್ಧು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ನಂತರ ಭಾಜಪ ಮತ್ತು ಆಮ್ ಆದ್ಮಿ ಪಕ್ಷಗಳು ಕಾಂಗ್ರೆಸ್ ವಿರುದ್ಧ ಟೀಕಿಸಿವೆ.
೧. ಭಾಜಪವು, ನವಜೋತ್ ಕೌರ್ ಅವರ ಈ ಹೇಳಿಕೆಯು ಕಾಂಗ್ರೆಸ್‌ನ ಆಡಳಿತದ ‘ಕರಾಳ ಸತ್ಯವನ್ನು’ ಬಯಲು ಮಾಡಿದೆ ಎಂದು ಭಾಜಪ ಹೇಳಿದೆ. ಅಲ್ಲದೆ, ಕಾಂಗ್ರೆಸ್ ಪಕ್ಷವು ‘ಹಣ ಮತ್ತು ಆಸ್ತಿ’ಯ ರಾಜಕಾರಣದಲ್ಲಿ ತೊಡಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದಿದೆ.
೨. ಕಾಂಗ್ರೆಸ್ ಸಂಸದ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಂಧಾವಾ ಮಾತನಾಡಿ, ನವಜೋತ್ ಕೌರ್ ಅವರ ಪತಿ ನವಜೋತ್ ಸಿಂಹ ಸಿದ್ದು ಅವರೇ ಪಕ್ಷವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಈಗ ನವಜೋತ್ ಕೌರ್ ಅವರು ಅವರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಹೇಳಿದರು.
೩. ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಲತೇಜ್ ಪನ್ನು ಮಾತನಾಡಿ, ನವಜೋತ್ ಕೌರ್ ಅವರು ಕಾಂಗ್ರೆಸ್‌ನಲ್ಲಿನ ವ್ಯವಹಾರಗಳನ್ನು ಹೊರಗೆ ತಂದಿದ್ದಾರೆ. ಕಾಂಗ್ರೆಸ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಈ ಹೇಳಿಕೆಯಿಂದ ಸ್ಪಷ್ಟವಾಗಿದೆ. ಕಾಂಗ್ರೆಸ್‌ನ ನಾಯಕತ್ವ ಹೇಗೆ ನಿರ್ಧಾರವಾಗುತ್ತದೆ ಎಂಬುದೂ ಇದರಿಂದ ನಮಗೆ ತಿಳಿದುಬಂದಿದೆ. ಅವರಿಗೆ ಪಂಜಾಬ್‌ಗಿಂತ ಅವರ ಪಕ್ಷ, ಹಣ ಮತ್ತು ವೈಯಕ್ತಿಕ ಲಾಭ ಮುಖ್ಯವಾಗಿವೆ ಎಂದರು.
ಸಂಪಾದಕೀಯ ನಿಲುವುಇದರಿಂದ ಕಾಂಗ್ರೆಸ್‌ನ ಆಡಳಿತ ಹೇಗೆ ನಡೆಯುತ್ತದೆ ಎಂಬುದು ಬಯಲಾಗಿದೆ. ಇಂತಹ ರಾಜಕೀಯ ಪಕ್ಷಗಳು ಎಂದಾದರೂ ದೇಶದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವೇ? |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!