
ನವದೆಹಲಿ – ವಾಯುಮಾಲಿನ್ಯದಿಂದ ಬಡ ವರ್ಗದವರಿಗೆ ಹೆಚ್ಚು ತೊಂದರೆಯಾಗುತ್ತದೆ, ಆದರೆ ಮಾಲಿನ್ಯವನ್ನು ಸೃಷ್ಟಿಸುವ ಹಲವಾರು ಚಟುವಟಿಕೆಗಳಲ್ಲಿ ಮುಖ್ಯವಾಗಿ ಶ್ರೀಮಂತ ವರ್ಗದವರು ಭಾಗಿಯಾಗಿರುತ್ತಾರೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಅವರು ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯ ವಾಯುಮಾಲಿನ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ವೇಳೆ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನ್ಯಾಯಮಿತ್ರ (ಅಮಿಕಸ್ ಕ್ಯೂರಿ) ಹಿರಿಯ ನ್ಯಾಯವಾದಿ ಅಪರಾಜಿತಾ ಸಿಂಗ್ ಅವರು ರಾಜ್ಯ ಸರಕಾರಗಳ ನಿರ್ಲಕ್ಷ್ಯವನ್ನು ಕಠಿಣ ಶಬ್ದಗಳಲ್ಲಿ ಟೀಕಿಸಿದರು. ನ್ಯಾಯಾಲಯವು ಕಠಿಣ ಮತ್ತು ಕಾರ್ಯರೂಪಕ್ಕೆ ತರಬಹುದಾದ ಆದೇಶಗಳನ್ನು ನೀಡದ ಹೊರತು, ರಾಜ್ಯ ಸರಕಾರಗಳು ವಾಯುಮಾಲಿನ್ಯವನ್ನು ತಡೆಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು. ಮಾಲಿನ್ಯದ ಮಟ್ಟವು ಅಪಾಯಕಾರಿಯಾಗಿದ್ದರೂ ಸಹ, ಕೆಲವು ಶಾಲೆಗಳಲ್ಲಿ ಹೊರಾಂಗಣ ಕ್ರೀಡಾ ಚಟುವಟಿಕೆಗಳು ಮುಂದುವರಿದಿವೆ. ಇದರಿಂದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಿಯಮಗಳು ಮತ್ತು ಮಾರ್ಗಸೂಚಿಗಳು ಅಸ್ತಿತ್ವದಲ್ಲಿದ್ದರೂ, ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಕಳೆದ ತಿಂಗಳು ಸರ್ವೋಚ್ಚ ನ್ಯಾಯಾಲಯವು ಡಿಸೆಂಬರ್-ಜನವರಿ ಅವಧಿಯಲ್ಲಿ ಹೊರಾಂಗಣ ಕ್ರೀಡೆಗಳಿಗೆ ನಿರ್ಬಂಧ ಹೇರುವಂತೆ ನಿರ್ದೇಶನ ನೀಡಿತ್ತು. ಆದರೂ ವಿವಿಧೆಡೆ ಕ್ರೀಡಾಕೂಟಗಳು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಕೆಲವು ನಿರ್ದೇಶನಗಳನ್ನು ಬಲವಂತವಾಗಿ ಜಾರಿಗೊಳಿಸಬೇಕಾಗುತ್ತದೆ ! – ಮುಖ್ಯ ನ್ಯಾಯಮೂರ್ತಿ
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಅವರು, ನ್ಯಾಯಾಲಯಕ್ಕೆ ಈ ಸಮಸ್ಯೆಯ ಬಗ್ಗೆ ಸಂಪೂರ್ಣ ಅರಿವಿದೆ ಮತ್ತು ಕೇವಲ ಪರಿಣಾಮಕಾರಿ ಹಾಗೂ ಕಾರ್ಯರೂಪಕ್ಕೆ ತರಬಹುದಾದ ಆದೇಶಗಳನ್ನು ಮಾತ್ರ ನೀಡಲಾಗುತ್ತದೆ ಎಂದರು. ಕೆಲವು ನಿರ್ದೇಶನಗಳನ್ನು ಬಲವಂತವಾಗಿ ಜಾರಿಗೊಳಿಸಬೇಕಾಗುತ್ತದೆ; ಆದರೆ ಮಹಾನಗರಗಳಲ್ಲಿ ಜನರ ಜೀವನಶೈಲಿಯನ್ನು ಬದಲಾಯಿಸುವುದು ಸುಲಭವಲ್ಲ ಎಂದೂ ಕೂಡ ಅವರು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!